ನವದೆಹಲಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಸೇರಿದಂತೆ ಬಿಜೆಪಿ (BJP) ನಾಯಕರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ (Congress) ನಾಯಕರ ನಿಯೋಗ ದೂರು ನೀಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧ ಸಿಬಿಐ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದ ಬಿಜೆಪಿ ಪಾಳಯಕ್ಕೆ ಕೈ ನಾಯಕರು ಶಾಕ್ ನೀಡಿದ್ದಾರೆ.
ಇಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ (Randeep Surjewala) ನೇತೃತ್ವದಲ್ಲಿ ಸಂಸದರ ತಂಡ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ವಿರುದ್ಧ ದೂರು ನೀಡಿದೆ. ಇದನ್ನೂ ಓದಿ: Maharashtraː ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಕಾಂಗ್ರೆಸ್‌ಗೆ ಗುಡ್‌ಬೈ
ಮಾಜಿ ಸಚಿವ ರಮೇಶ ಜಾರಕಿಹೊಳಿ ಆರು ಸಾವಿರಕ್ಕೆ ಒಂದರಂತೆ ಮತ ಖರೀದಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರಶ್ನೆ ಮಾಡುವಂತಿದೆ. ಜನರಿಗೆ ಹಣದ ಆಮಿಷ ಒಡ್ಡಿ ಕೋಟಿ ಕೋಟಿ ಹಣ ಖರ್ಚು ಮಾಡಿ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ. ಈ ಹೇಳಿಕೆ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದ್ದು, ಈ ಬಗ್ಗೆ ತನಿಖೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ರಣದೀಪ್ ಸುರ್ಜೆವಾಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಆರು ಸಾವಿರ ರೂಪಾಯಿಗೆ ಒಂದರಂತೆ ಎಲ್ಲ ಮತಗಳನ್ನು ಕೊಳ್ಳುತ್ತಿದೆ. ಇದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಮೇಶ ಜಾರಕಿಹೊಳಿ, ಜೆ.ಪಿ.ನಡ್ಡಾ ಹಾಗೂ ನಳಿನ್ ಕುಮಾರ್ ಕಟೀಲ್ ಪಿತೂರಿ ಇದೆ. ಹೀಗಾಗಿ ಈ ಬಗ್ಗೆ ಪೂರ್ತಿ ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ ಎಂದರು. ಇದನ್ನೂ ಓದಿ: ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ
ಮತದಾರರ ಪಟ್ಟಿಯಿಂದ ಬಿಜೆಪಿ ವಿರುದ್ಧ ಮತದಾರರ ಹೆಸರು ಡಿಲಿಟ್ ಮಾಡಿರುವ ಚಿಲುಮೆ ಪ್ರಕರಣದ ಬಗ್ಗೆ ಮಾತನಾಡಿ, ಶಿವಾಜಿನಗರದಲ್ಲಿ 9 ಸಾವಿರ ಮತದಾರರ ಹೆಸರು ಡಿಲಿಟ್ ಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಡಿಲಿಟ್ ಮಾಡಲಾಗಿದೆ. ಅಲ್ಪಸಂಖ್ಯಾತರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರ ಹೆಸರನ್ನು ಡಿಲಿಟ್ ಮಾಡಲಾಗಿದೆ. ಈ ಬಗ್ಗೆ ಸಹ ದೂರು ನೀಡಿದ್ದು, ತನಿಖೆಗೆ ಮತ್ತೆ ಒತ್ತಾಯಿಸಿದೆ ತಿಳಿಸಿದರು.
ಬಳಿಕ ಮಾತನಾಡಿದ ಸಂಸದ ಹನುಮಂತಯ್ಯ, ಐದು ಕೋಟಿಗೆ ಮತಗಳನ್ನು ಕೊಳ್ಳುತ್ತೇವೆ ಎನ್ನುವ ಹೇಳಿಕೆ ಬಿಜೆಪಿಯ ನಿರ್ಲಜ್ಜ ಸ್ಥಿತಿ ತಲುಪಿರುವುದನ್ನು ತೋರಿಸುತ್ತದೆ. ಮತ ಕೊಳ್ಳುವ ಹೇಳಿಕೆ ಬಗ್ಗೆ ತನಿಖೆ ಮಾಡಬೇಕು ಅನ್ನೋದು ನಮ್ಮ ಆಗ್ರಹ. ಜೊತೆಗೆ ಶಿವಾಜಿನಗರದಲ್ಲಿ 9 ಸಾವಿರ ಮತದಾರರ ಹೆಸರು ತೆಗೆದಿರುವ ಬಗ್ಗೆಯೂ ತನಿಖೆಗೆ ಮನವಿ ಮಾಡಿದೆ ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k