– ಮಹಿಳಾ ಆಯೋಗದಿಂದ ಮಾಜಿ ಸಿಎಂಗೆ ನೋಟಿಸ್
ಬೆಂಗಳೂರು: ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದರೆ, ಇತ್ತ ಮಹಿಳಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.
ಮಹಿಳೆಯರ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಮಹಿಳೆಯರು ದಾರಿ ತಪ್ಪಿದ್ದಾರೆ ಅಂತಾ ಮಾತಾಡಿದ್ದಾರೆ. ಮನುವಾದಿ ರೀತಿಯಲ್ಲಿ ಮನಸ್ಸು ಬಂದಂತೆ ಮಾತಾಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ (Congress) ನಿಯೋಗ ದೂರಿನಲ್ಲಿ ಒತ್ತಾಯಿಸಿದೆ.
Advertisement
Advertisement
ನೋಟಿಸ್ ಜಾರಿ: 15 ದಿನದ ಒಳಗಡೆ ಉತ್ತರಿಸುವಂತೆ ಮಹಿಳಾ ಆಯೋಗ ಜಾರಿಗೊಳಿಸಿದ ನೋಟಿಸ್‍ನಲ್ಲಿ ತಿಳಿಸಲಾಗಿದೆ. ರಾಜಕಾರಣಿಗಳು ಮತದ ಸಲುವಾಗಿ ಆಕ್ಷೇಪಾರ್ಹ ಮಾತಾಡೋದು ಸರಿಯಲ್ಲ. ಹೆಣ್ಣಿನ ಬಗ್ಗೆ ಕೀಳು ಮಟ್ಟದಲ್ಲಿ ಮಾತಾಡುವವರು ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನ ಅವಮಾನಿಸಿಲ್ಲ – ಹೆಣ್ಣುಮಕ್ಕಳ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ
Advertisement
Advertisement
ಹೆಚ್‍ಡಿಕೆ ವಿಷಾದ: ತಮ್ಮ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ, ಇತ್ತೀಚೆಗೆ ನಾನು ತುಮಕೂರಿನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದೆ. ಆ ಸಭೆಯಲ್ಲಿ ಹಲವಾರು ವಿಷಯಗಳನ್ನ ಪ್ರಸ್ತಾಪ ಮಾಡಿದ್ದೆ. ಆದರೆ ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನೋದನ್ನ ಹೇಳಿದ್ದೇನೆ. ಆದರೆ ಕಾಂಗ್ರೆಸ್ ನಾಯಕರು ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಮಹಿಳೆಯರಿಗೆ ದುಃಖ ಆಗಿದ್ದರೆ ಈಗಲೂ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.