ಬೆಂಗಳೂರು: ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಐಟಿ ಇಲಾಖೆಯನ್ನು ಮೋದಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಎರಡು ದೂರು ನೀಡಿದ್ದೇವೆ. ಆದರೂ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನೇತೃತ್ವದ ನಿಯೋಗ ದೂರು ನೀಡಿದೆ.
Advertisement
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ 5 ಕೋಟಿ ರೂ. ಅಕ್ರಮ ಹಣವನ್ನು ಪ್ರತಿ ವಿಧಾನಸಭಾಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಯಲಹಂಕ ಸೇರಿದಂತೆ ಕೆಲವೆಡೆ ದೇವರ ಲ್ಲಿ ಪ್ರಮಾಣ ಮಾಡಿಸಿ ಬಿಜೆಪಿ ವೋಟು ಪಡೆಯುತ್ತಿದೆ. ಸುರೇಶ್ ಕುಮಾರ್ ಪುತ್ರಿ ಹಣ ಹಂಚಿಕೆ ದೂರು ಏನಾಯ್ತು ಎಂದು ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಕೇಳಿದೆ.