ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ದೂರು

Public TV
1 Min Read
Anant Kumar Hegde CONGRESS

ಬೆಂಗಳೂರು: ರಾಹುಲ್ ಗಾಂಧಿ ಅವರ ಬಗ್ಗೆ ತೇಜೋವಧೆ ಆಗುವಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರು ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ಇಂದು ಅನಂತ್ ಕುಮಾರ್ ಹೆಗ್ಡೆ ಅವರ ದೂರು ನೀಡಲಾಗಿದ್ದು, ರಾಹುಲ್ ಹುಟ್ಟಿನ ಮೂಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರ ತೇಜೋವಧೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರ ಹುಟ್ಟು ಹಾಗೂ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ದೇಶಕ್ಕಾಗಿ ಪ್ರಾಣಕೊಟ್ಟ ಕುಟುಂಬದ ಭಾವನೆಗಳಿಗೆ ನೋವುಂಟಾಗುವಂತೆ ಸಚಿವರು ಹೇಳಿಕೆ ನೀಡಿದ್ದಾರೆ. ಸಚಿವರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಧರ್ಮ, ಮತ ಆಧಾರದಲ್ಲಿ ಜನರ ಮತವನ್ನು ಪಡೆಯಲು ಸಚಿವರು ಯತ್ನಿಸಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಅದ್ದರಿಂದ ಐಪಿಸಿ ಸೆಕ್ಷನ್ 153ಎ, 295ಎ ಹಾಗೂ 1951ರ ಜನಪ್ರತಿನಿಧಿಗಳ ಕಾಯ್ದೆಯ ಅನ್ವಯ ಇದು ಅಪರಾಧವಾಗುತ್ತದೆ ಎಂದು ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಮುಕ್ತವಾದ ನ್ಯಾಯಯುತ ಚುನಾವಣೆ ನಡೆಸುವ ಉದ್ದೇಶದಿಂದ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಮನವಿ ಮಾಡಿದೆ.

rahul gandhi 3

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಿಜೆಪಿ ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅನಂತ್ ಕುಮಾರ್ ಹೆಗ್ಡೆ ಅವರು, ರಾಹುಲ್ ಅವರ ಬ್ರಹ್ಮಣ ಹೇಳಿಕೆಯನ್ನು ಟೀಕೆ ಮಾಡಿದ್ದರು. ತಾಯಿ ಕ್ರಿಶ್ಚಿಯನ್, ಅಪ್ಪ ಮುಸಲ್ಮಾನ, ಆದ್ರೆ ಮಗ ಹೇಗೆ ಬ್ರಾಹ್ಮಣನಾಗಲು ಸಾಧ್ಯ? ಜಗತ್ತಿನ ಯಾವುದೇ ಪ್ರಯೋಗಾಲಯದಲ್ಲೂ ಇರದ ಹೈಬ್ರಿಡ್ ತಳಿ ಕಾಂಗ್ರೆಸ್ ಲ್ಯಾಬ್‍ನಲ್ಲಿ ಮಾತ್ರ ಇದೆ. ರಾಹುಲ್ ಗಾಂಧಿ ಸುಳ್ಳು ಹೇಳಿದರೂ ನಂಬುವಂತಹ ಸುಳ್ಳು ಹೇಳಬೇಕು. ರಾಹುಲ್ ಡಿಎನ್‍ಎ ಟೆಸ್ಟ್ ಮಾಡಬೇಕೆಂದು ಎಂದಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *