Thursday, 16th August 2018

Recent News

ಶಾಮನೂರು ಶಿವಶಂಕರಪ್ಪರಿಗೆ ತಪ್ಪಿದ ಸಚಿವ ಸ್ಥಾನ- ಕೈ ಕಾರ್ಪೊರೇಟರ್ ರಾಜೀನಾಮೆ

ದಾವಣಗೆರೆ: ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪನವರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಶಿವಗಂಗಾ ಬಸವರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಟಿಜೆ ನಗರ ಕಾರ್ಪೋರೇಟರ್ ಆಗಿರುವ ಶಿವಗಂಗಾ ಬಸವರಾಜ್ ಮಹಾನಗರ ಪಾಲಿಕೆ ಆಯುಕ್ತರನ್ನ ಭೇಟಿ ಮಾಡಿ ತಮ್ಮ ಕಾರ್ಪೋರೇಟರ್ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕಾಂಗ್ರೆಸ್‍ನ ಹಿರಿಯ ಮುಖಂಡ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಿವಗಂಗಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಬಳಿಕ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು, ಆದ್ರೆ ಅಂತ ಒಬ್ಬ ನಾಯಕನಿಗೆ ಸಚಿವ ಸ್ಥಾನ ನೀಡದೇ ವೀರಶೈವ ಲಿಂಗಾಯತರಿಗೆ ಅನ್ಯಾಯವಾಗಿದೆ. ಈ ಕುರಿತು ಬೆಂಬಲಿಗರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜೆಯ ಒಳಗಡೆ ಸಚಿವ ಸ್ಥಾನ ನೀಡದಿದ್ದರೆ ಮಹಾನಗರ ಪಾಲಿಕೆಯ 39 ಸದಸ್ಯರು ಕೂಡ ರಾಜೀನಾಮೆ ನೀಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *