Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕರ ಕಿತ್ತಾಟದಿಂದಲೇ ಲೋಕ ಸಮರದಲ್ಲಿ ಕಾಂಗ್ರೆಸಿಗೆ ಸೋಲು – ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾಯಕರ ಕಿತ್ತಾಟದಿಂದಲೇ ಲೋಕ ಸಮರದಲ್ಲಿ ಕಾಂಗ್ರೆಸಿಗೆ ಸೋಲು – ಪರಮೇಶ್ವರ್

Karnataka

ನಾಯಕರ ಕಿತ್ತಾಟದಿಂದಲೇ ಲೋಕ ಸಮರದಲ್ಲಿ ಕಾಂಗ್ರೆಸಿಗೆ ಸೋಲು – ಪರಮೇಶ್ವರ್

Public TV
Last updated: September 14, 2019 5:28 pm
Public TV
Share
2 Min Read
parameshwar
SHARE

ತುಮಕೂರು: ಕಾಂಗ್ರೆಸ್ ನಾಯಕರ ನಡುವಿನ ಕಿತ್ತಾಟ, ಒಗ್ಗಟ್ಟು ಇಲ್ಲದಿರುವುದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ವರದಿ ನೀಡಿರುವುದು ನಿಜ. ಈ ಕುರಿತು ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನ ಹೆಗ್ಗೆರೆಯ ಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿಯಲ್ಲಿ ಒಗ್ಗಟ್ಟಿನ ಕೊರತೆಯಿಂದಲೇ ಸೋಲುಂಟಾಗಿದೆ ಎಂದು ತಿಳಿದು ಬಂದಿದೆ. ನಾಯಕರ ನಡುವೆ ಯಾಕೆ ಭಿನ್ನಾಭಿಪ್ರಾಯ ಮೂಡಿತು ಎನ್ನುವುದರ ಕುರಿತು ಚರ್ಚೆ ಮಾಡುತ್ತೇವೆ. ಪಕ್ಷದ ಪ್ರಮುಖ ನಾಯಕತ್ವದಿಂದ ಆಗಿದೆಯೋ ಅಥವಾ ಸ್ಥಳೀಯ ಮುಖಂಡರಿಂದ ಆಗಿದೆಯೋ ಎಂಬುದನ್ನು ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Congress flag 2

ಈ ಕುರಿತು ಸೆಪ್ಟೆಂಬರ್ 18ರಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಕ್ರಮ ಕೈಗೊಳ್ಳುವ ಕುರಿತು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಅದಷ್ಟು ಬೇಗ ಹೈಕಮಾಂಡ್ ವಿರೋಧ ಪಕ್ಷ ನಾಯಕರನ್ನು ಆಯ್ಕೆ ಮಾಡಲಿದೆ. ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್ ಸೇರಿದಂತೆ ಹಲವರ ಹೆಸರು ಕೇಳಿ ಬಂದಿದೆ. ಯಾರೇ ಆದರೂ ನಮ್ಮ ನಾಯಕರೇ. ಹೈ ಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೋ ಗೊತ್ತಿಲ್ಲ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೆನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಅನರ್ಹರಿಗೆ ತಪ್ಪಿನ ಅರಿವಾಗಿದೆ
ಅನರ್ಹ ಶಾಸಕರಿಗೆ ತಮ್ಮ ತಪ್ಪಿನ ಅರಿವಾಗಿದೆ. ಮುಂದಿನ ದಿನದಲ್ಲಿ ಏನಾಗುತ್ತೋ ಕಾದು ನೋಡೋಣ. ಅನರ್ಹರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವ ಸನ್ನಿವೇಶ ಬರುವುದಿಲ್ಲ. ಒಂದು ವೇಳೆ ಬಂದರೆ, ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯ ಬಿಜೆಪಿ ಸರ್ಕಾರದ ಉಳಿವಿನ ಬಗ್ಗೆ ಸಮಯ ನಿಗದಿ ಮಾಡಲ್ಲ, ಆದರೆ ಹೆಚ್ಚು ಕಾಲ ಈ ಸರ್ಕಾರ ಉಳಿಯುವುದಿಲ್ಲ. ಮಧ್ಯಂತರ ಚುನಾವಣೆ ಕುರಿತು ನನಗೆ ತಿಳಿದಿಲ್ಲ. ಆದರೆ, ಮಧ್ಯಂತರ ಚುನಾವಣೆ ನಡೆದರೆ ನಾವು ತಯಾರಾಗುತ್ತಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

Rebel MLAs B 1

ವರದಿಯಲ್ಲೇನಿದೆ?
ಕಾಂಗ್ರೆಸ್ ಶಾಸಕರ ಸ್ವಪ್ರತಿಷ್ಠೆ, ಕೆಲವರ ಪಕ್ಷ ವಿರೋಧಿ ಚಟುವಟಿಕೆ, ನಾಯಕರ ನಡುವಿನ ಆಂತರಿಕ ಕಿತ್ತಾಟಗಳಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ನೇತೃತ್ವದ ಸತ್ಯ ಶೋಧನಾ ಸಮಿತಿ ತಿಳಿಸಿದೆ. ತನ್ನ ವರದಿಯಲ್ಲಿ ಸಮಿತಿ ಕಾಂಗ್ರೆಸ್ ಕಾಯಕರ್ತರು ಕೆಲಸ ಮಾಡಿದ್ದರೂ ನಾಯಕರ ಒಳಜಗಳಿಂದಾಗಿ ಅಭ್ಯರ್ಥಿಗಳು ಸೋತಿದ್ದಾರೆ. ಚುನಾವಣೆ ಸೋಲಿಗೆ ಮೈತ್ರಿಯೂ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಕ್ಟೋಬರ್ 2ರಂದು ಕೆಪಿಸಿಸಿಗೆ ಈ ವರದಿಯನ್ನು ಸಲ್ಲಿಸಲು ಸಮಿತಿ ತೀರ್ಮಾನಿಸಿದೆ.

TAGGED:congressdefeatDisqualified MLAsDr. G ParameshwarLok Sabha ElectionsPublic TVsiddaramaiahಅನರ್ಹ ಶಾಸಕರುಕಾಂಗ್ರೆಸ್ಡಾ. ಜಿ ಪರಮೇಶ್ವರ್ಪಬ್ಲಿಕ್ ಟಿವಿಲೋಕಸಭಾ ಚುನಾವಣೆಸಿದ್ದರಾಮಯ್ಯಸೋಲು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
6 hours ago
virat kohli 2
Cricket

ಕೊಹ್ಲಿ, ಪಡಿಕ್ಕಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ತವರಲ್ಲಿ ಆರ್‌ಸಿಬಿಗೆ 5 ವಿಕೆಟ್‌ಗಳ ಜಯ

Public TV
By Public TV
6 hours ago
01 18
Big Bulletin

ಬಿಗ್‌ ಬುಲೆಟಿನ್‌ 24 April 2026 ಭಾಗ-1

Public TV
By Public TV
6 hours ago
02 18
Big Bulletin

ಬಿಗ್‌ ಬುಲೆಟಿನ್‌ 24 April 2026 ಭಾಗ-2

Public TV
By Public TV
6 hours ago
03 16
Big Bulletin

ಬಿಗ್‌ ಬುಲೆಟಿನ್‌ 24 April 2026 ಭಾಗ-3

Public TV
By Public TV
6 hours ago
Bengaluru should become the capital of agricultural technology like IT Siddaramaiah
Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?