– ಒಳಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು
ಬೆಂಗಳೂರು: ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ, ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಮಂಗಳವಾರ ಶಿಕಾರಿಪುರಕ್ಕೆ ತೆರಳಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದರು.
Advertisement
ಲೋಕಸಭಾ ಸದಸ್ಯ ಬಿವೈ ರಾಘವೇಂದ್ರ, ಜಿಲ್ಲಾ ಪೋಲಿಸ್ ಮುಖ್ಯಸ್ಥ ಮಿಥುನ್ ಕುಮಾರ್ ಸೇರಿದಂತೆ ಸ್ಥಳೀಯ ಅಧಿಕಾರಿಗಳೂ ಉಪಸ್ಥಿತರಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರ ಪಟ್ಟಣದಲ್ಲಿ ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Advertisement
Advertisement
ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರಿಸಿದ ಸಚಿವರು, ಸರ್ಕಾರ ಪರಿಶಿಷ್ಠ ಜಾತಿ ಸಮುದಾಯಗಳಿಗೆ ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅನುಷ್ಠಾನ ಮಾಡಿಲ್ಲ. ಈ ಕುರಿತು ವಿರೋಧಪಕ್ಷದ ನಾಯಕರು ಅಪಪ್ರಚಾರ ನಡೆಸಿ, ರಾಜಕೀಯ ಬೇಳೆ ಬೇಯಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಂಜಾರ ಸಮುದಾಯದ ಅಭಿವೃದ್ಧಿಗೆ ಬಿಎಸ್‌ವೈ ಸಾಕಷ್ಟು ಕೊಡುಗೆ ನೀಡಿದ್ದಾರೆ- ಆರಗ
Advertisement
ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್ ನಾಯಕರು ಪರಿಶಿಷ್ಠ ಜಾತಿ ಪಂಗಡಗಳ ಮಧ್ಯೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಯಾವುದೇ ಕ್ರಮಕ್ಕೆ ಮುಂದಾಗದೆ ನ್ಯಾಯ ಒದಗಿಸಲು ವಿಫಲರಾದ ವಿರೋಧ ಪಕ್ಷದ ನಾಯಕರು ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಕ್ತವಾಗಿ ಚರ್ಚೆ ನಡೆಸಲು ಸಿದ್ಧರಿದ್ದು, ಯಾವುದೇ ಕಾರಣಕ್ಕೂ ಯಾರೇ ಆಗಲಿ, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: 9 ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ