ರಾಯ್ಪುರ: ಮದ್ಯದ ವಿಚಾರದಲ್ಲೂ ಕಾಂಗ್ರೆಸ್ (Congress) ಭ್ರಷ್ಟಾಚಾರ ಮಾಡಿದೆ. ಹಸುವಿನ ಸಗಣಿಯನ್ನೂ ಬಿಟ್ಟಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ವಾಗ್ದಾಳಿ ನಡೆಸಿದ್ದಾರೆ.
ಛತ್ತೀಸ್ಗಢದಲ್ಲಿ (Chhattisgarh) ಬಿಜೆಪಿ (BJP) ನಡೆಸುತ್ತಿರುವ ಎರಡು ‘ಪರಿವರ್ತನ್ ಯಾತ್ರೆ’ಗಳ ಸಮಾರೋಪದಲ್ಲಿ ಶನಿವಾರ ಮೋದಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಛತ್ತೀಸ್ಗಢದ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಗಡಿ ನುಸುಳಲು ಉಗ್ರರ ಯತ್ನ – ಇಬ್ಬರನ್ನು ಹೊಡೆದುರುಳಿಸಿದ ಸೇನೆ
Advertisement
Advertisement
ಬಡವರಿಗೆ ಕಾಂಗ್ರೆಸ್ ಮಾಡಿದಷ್ಟು ಅನ್ಯಾಯವನ್ನು ಯಾರೂ ಮಾಡಿಲ್ಲ. ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಎಲ್ಲರಿಗೂ ಉಚಿತ ಪಡಿತರ ನೀಡಲು ನಿರ್ಧರಿಸಿದ್ದೆ. ಆದರೆ ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರ ಅದರಲ್ಲಿ ಭ್ರಷ್ಟಾಚಾರ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Advertisement
ನಾನು ನೀಡಿದ್ದ ಗ್ಯಾರಂಟಿಯನ್ನು ಪೂರ್ಣಗೊಳಿಸಿದ್ದೇನೆ. ಈಗ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಯಲ್ಲಿ 33% ರಷ್ಟು ಸೀಟುಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು. ಬಿಜೆಪಿ ಆಡಳಿತದಲ್ಲಿ ನಾರಿ ಶಕ್ತಿ ಅಧಿನಿಯಮ ಈಗ ನಿಜವಾಗಿದೆ. ನಮ್ಮ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅದಕ್ಕೆ ಸಹಿ ಹಾಕಿ ನಿನ್ನೆ ಕಾನೂನು ಮಾಡಿದ್ದಾರೆ. ಆದರೆ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಮಸೂದೆ 30 ವರ್ಷಗಳಿಂದ ಬಾಕಿ ಉಳಿದಿತ್ತು ಎಂದು ಪರೋಕ್ಷವಾಗಿ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದ ಚುನಾವಣೆ ಗಾಂಧಿ ಮತ್ತು ಗೋಡ್ಸೆ ಸಿದ್ಧಾಂತಗಳ ನಡುವಿನ ಹೋರಾಟ: ರಾಹುಲ್ ಗಾಂಧಿ
Advertisement
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಮ್ಮ ಮೇಲೆ ಅಸಮಾಧಾನಗೊಂಡಿವೆ. ಎಲ್ಲಾ ಮಹಿಳೆಯರು ಮೋದಿಗೆ ಮಾತ್ರ ಆಶೀರ್ವಾದ ಮಾಡುತ್ತಾರೆ ಎಂದು ಅವರು ಭಾವಿಸಿದ್ದಾರೆ. ಅವರು ಹೊಸ ಗಿಮಿಕ್ ಶುರು ಮಾಡಿದ್ದಾರೆ. ಅವರು ಮಹಿಳೆಯರನ್ನು ಜಾತಿಗಳಾಗಿ ವಿಭಜಿಸಲು ಬಯಸುತ್ತಾರೆ. ಇದು ಮುಂದಿನ ಸಾವಿರ ವರ್ಷಗಳ ಮೇಲೆ ಪರಿಣಾಮ ಬೀರುವ ನಿರ್ಧಾರ ಎಂದು ನಾನು ಛತ್ತೀಸ್ಗಢದ ಮಹಿಳೆಯರಿಗೆ ಹೇಳಬಯಸುತ್ತೇನೆ. ಅವರ (ವಿಪಕ್ಷಗಳು) ಸುಳ್ಳಿಗೆ ಮರುಳಾಗಬೇಡಿ ಎಂದು ಸಲಹೆ ನೀಡಿದ್ದಾರೆ.
ದಲಿತರು, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು ಬೆಳೆಯುತ್ತಿರುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಮೋದಿಯನ್ನು ಗುರಿಯಾಗಿಸಿ ಅಲ್ಪಸಂಖ್ಯಾತರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
Web Stories