ಮೈಸೂರು: ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ (Chamaraja Assembly Constituency) ಮಾಜಿ ಶಾಸಕ ವಾಸು (Vasu) ಮೇಲೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ತೂಗುಗತ್ತಿ ತೂಗೋದಕ್ಕೆ ಆರಂಭವಾಗಿದೆ. ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ವಾಸುಗೆ ನೋಟಿಸ್ ಕೊಟ್ಟಿದೆ. ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನೋಟಿಸ್ ಕೊಟ್ಟಿದ್ದು ಒಂದು ವಾರದ ಒಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ.
Advertisement
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೀರಿ. ಚಾಮರಾಜ ಕ್ಷೇತ್ರ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದೀರಿ. ಈ ಬಗ್ಗೆ ಕೆಪಿಸಿಸಿಗೆ ಲಿಖಿತ ಪತ್ರ ಬಂದಿದೆ. ಹೀಗಾಗಿ ನಿಮಗೆ ಪತ್ರ ಬಂದ 7 ದಿನಗಳ ಒಳಗೆ ಲಿಖಿತ ವಿವರಣೆ ಕೊಡಿ ಎಂದು ತಿಳಿಸಲಾಗಿದೆ. ವಾಸುಗೆ ಪಕ್ಷದಿಂದ ಗೇಟ್ ಪಾಸ್ ಕೊಡಿಸಲು ಸಿಎಂ ಸಿದ್ದರಾಮಯ್ಯ ಬೆಂಬಲಿಗರ ಶತಪ್ರಯತ್ನಕ್ಕೆ ಮೊದಲ ಯಶಸ್ಸು ಈ ಮೂಲಕ ಸಿಕ್ಕಂತಾಗಿದೆ. ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದೆ ಬಜೆಟ್ ಅಧಿವೇಶನ ನಡೀತಿರೋದು ಇದೇ ಮೊದಲು: ಬಿಜೆಪಿ ವಿರುದ್ಧ ಸಿಎಂ ಗುಡುಗು
Advertisement
Advertisement
ಈ ಹಿಂದೆ ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಕಳೆದವಾರ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ (Congress) ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದರು. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಮಾಜಿ ಶಾಸಕ ವಾಸುರನ್ನ ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಿ – ಸಿಎಂ ಬೆಂಬಲಿಗರಿಂದ ಬಹಿರಂಗ ಪತ್ರ
Advertisement
ಪತ್ರದಲ್ಲಿ ಏನಿತ್ತು?
ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ (BJP) ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದರು.
ಸಿದ್ದು ವಿರುದ್ಧ ಕಿಡಿ ಕಾರಿದ್ದ ವಾಸು:
ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಕೈತಪ್ಪಿದ ನಂತರ ಸುದ್ದುಗೋಷ್ಠಿ ನಡೆಸಿದ್ದ ಮಾಜಿ ಶಾಸಕ ವಾಸು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
Web Stories