– ಸೋಲ್ಹಾಪುರದಲ್ಲಿ ಕಾಯ್ತಿದ್ದಾರಂತೆ ಉಳಿದೆಂಟು ಮಂದಿ!
ಬೆಂಗಳೂರು: ಕಾಂಗ್ರೆಸ್‍ನಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು, ಮೂವರು ಶಾಸಕರು ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ. ಹೌದು, ಬಿಜೆಪಿಯ ಆಪರೇಷನ್ ಕಮಲಕ್ಕೆ ಮೂವರು ಶಾಸಕರು ಒಳಗಾಗಿದ್ದು, ಭಾನುವಾರ ಚೆನ್ನೈನಿಂದ ಮುಂಬೈನಲ್ಲಿ ಪ್ರಯಾಣಿಸುತ್ತಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಶಾಸಕರಾದ ಕೆ.ಸುಧಾಕರ್, ಎಂ.ಟಿ.ಬಿ. ನಾಗರಾಜ್ ಮತ್ತು ನಾಗೇಶ್ ಮೂವರು ಒಂದೇ ಕಾರಿನಲ್ಲಿ ಚೆನ್ನೈನತ್ತ ಪ್ರಯಾಣ ಬೆಳೆಸುತ್ತಿರುವ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಇತ್ತ ಉಳಿದಿರುವ 11 ಅತೃಪ್ತ ಶಾಸಕರು ಭಾನುವಾರ ಮುಂಬೈಗೆ ತೆರಳುವ ಸಾಧ್ಯತೆಗಳಿವೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ. ಕಾಂಗ್ರೆಸ್ ಶಾಸಕರು ಮುಂಬೈನ ಜೂಹು ಏರಿಯಾದ ಜೆ.ಡಬ್ಲೂ ಮ್ಯಾರಿಯೇಟ್ ಹೋಟೆಲನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿ ಎಂದು ಮೂಲಗಳು ಪಬ್ಲಿಕ್ ಟಿವಿಗೆ ಲಭಿಸಿವೆ.
Advertisement
Advertisement
ಈ ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದು, ಸಚಿವ ಸ್ಥಾನಕ್ಕಾಗಿ ಶಾಸಕರು ಭಾರೀ ಲಾಬಿಗೆ ಮುಂದಾಗಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿ ವಿವಾದ ಬಗೆಹರಿಯುತ್ತಿದ್ದಂತೆ ಬಳ್ಳಾರಿ ನಾಯಕರು ಸಹ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರಂತೆ. ಶಾಸಕರಾದ ಆನಂದ್ ಸಿಂಗ್ ಮತ್ತು ನಾಗೇಶ್ ಇಬ್ಬರ ನಡುವೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಜೊತೆ ವಿದೇಶದಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಸಂತೋಷ್ ಲಾಡ್ ಸಂಪರ್ಕದಲ್ಲಿದ್ದಾರಂತೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
Advertisement
ಬೆಳಗ್ಗೆ 8 ಗಂಟೆಗೆ ವೇಳೆಗೆ ಬಂದ ಫೋನ್ ಕಾಲ್ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೆನ್ಷನ್ ಜಾಸ್ತಿ ಮಾಡಿದೆಯಂತೆ. ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಸಿಎಂ ಕುಮಾರಸ್ವಾಮಿ ಅವರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು ಫೋನ್ ಮಾಡಿ ವಿಶೇಷ ಮಾಹಿತಿ ನೀಡಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ಕಾಂಗ್ರೆಸಿನಲ್ಲಿ ಬಂಡಾಯ ಎದ್ದಿರುವ ಕೆಲ ಶಾಸಕರು ಮುಂಬೈಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿಯನ್ನು ಈ ವೇಳೆ ನೀಡಿದ್ದಾರೆ ಎನ್ನಲಾಗಿದೆ.
Advertisement
ಕಾಂಗ್ರೆಸ್ಸಿನ ಪ್ರಮುಖ ನಾಯಕರ ನೇತೃತ್ವದಲ್ಲಿ ಕೆಲ ಶಾಸಕರು ಆಪರೇಷನ್ ಕಮಲ ಒಳಗಾಗುವ ಸಾಧ್ಯತೆ ಇದ್ದು, ವಿಶೇಷ ವಿಮಾನ ಮೂಲಕ ಹೊರ ರಾಜ್ಯಕ್ಕೆ ಹೋಗಲು ಪ್ಲಾನ್ ಮಾಡಿದ್ದಾರೆ ಎಂಬ ಮಾಹಿತಿ ಸಿಎಂ ಅವರಿಗೆ ಲಭಿಸಿದೆ ಎನ್ನಲಾಗಿದೆ. ಇದಕ್ಕಾಗಿ ವಿಶೇಷ ವಿಮಾನ ಬುಕ್ ಮಾಡಲು ಸಿದ್ಧತೆ ಕೂಡ ನಡೆದಿದ್ದು, ಸುಮಾರು 10 ರಿಂದ 15 ಶಾಸಕರು ಮುಂಬೈಗೆ ಹೋಗಲು ಸಿದ್ಧರಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv