ನವದೆಹಲಿ: ಕಾಂಗ್ರೆಸ್ ಪಕ್ಷವು ಗಾಂಧಿ ಕುಟುಂಬದಿಂದಾಚೆ ಕಾಣುವುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ನೇತೃತ್ವ ವಹಿಸಿಕೊಂಡರೂ ಪಶ್ಚಿಮ ಬಂಗಾಳದಲ್ಲಿ ಒಂದು ಸ್ಥಾನವನ್ನೂ ಗೆಲ್ಲಲಾಗಲಿಲ್ಲ. ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಉಸ್ತುವಾರಿ ವಹಿಸಿಕೊಂಡರೂ ಎರಡು ಸ್ಥಾನಗಳ ಮೇಲೆ ಗೆಲ್ಲಲಾಗಲಿಲ್ಲ. ಈಗ ಸೋನಿಯಾ ಗಾಂಧಿ ಅವರು ಪಕ್ಷದ ನಾಯಕತ್ವ ವಹಿಸಿಕೊಂಡಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ನನ್ನನ್ನು ಈ ಬಾರಿ ಪರಿಗಣಿಸುತ್ತಾರೆ ಎಂಬ ನಂಬಿಕೆ ಇದೆ: ರೇಣುಕಾಚಾರ್ಯ
Advertisement
Advertisement
ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ? ಅವರು ತಮ್ಮನ್ನು ಕೇವಲ ಒಂದು ಕುಟುಂಬಕ್ಕೆ ಸೀಮಿತಗೊಳಿಸುತ್ತಾರೆಯೇ ಎಂಬ ಪ್ರಶ್ನೆಗಳು ಹಲವು ವರ್ಷಗಳಿಂದ ಬದಲಾಗದೇ ಉಳಿದಿವೆ ಎಂದು ಟೀಕಿಸಿದ್ದಾರೆ.
Advertisement
ಪ್ರಸ್ತುತ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ ದೇಶಕ್ಕಿಂತಲೂ ಭಾರತದ ಆರ್ಥಿಕ ಪರಿಸ್ಥಿತಿ ದುಸ್ಥರವಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ಟೀಕೆಗೆ ಟಾಂಗ್ ಕೊಟ್ಟಿರುವ ಠಾಕೂರ್, ಪ್ರಪಂಚದ ಮತ್ತು ನಮ್ಮ ನೆರೆಹೊರೆಯ ದೇಶಗಳ ಪ್ರಸ್ತುತ ಪರಿಸ್ಥಿತಿಯನ್ನು ನೀವು ನೋಡಿದ್ದೀರಿ. ಭಾರತವು ತನ್ನ ನಾಯಕತ್ವವನ್ನು ಸರಿಯಾಗಿ ಆರಿಸಿಕೊಂಡಿರುವುದರಿಂದ ದೇಶ ಅಭಿವೃದ್ಧಿ ಹೊಂದುತ್ತಿದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪಕ್ಷವು ಎಲ್ಲಾ ಹಂತಗಳಲ್ಲೂ ಏಕತೆ ಸಾಧಿಸಲಿ: ಸೋನಿಯಾ ಗಾಂಧಿ
Advertisement
ಕೇಂದ್ರದ ಕೋವಿಡ್ ಲಸಿಕೆ ಅಭಿಯಾನ ಕುರಿತು ಮಾತನಾಡಿ, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರವು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಪ್ರಯತ್ನಿಸಿದೆ. ನಾವು ದೀರ್ಘಕಾಲದವರೆಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಿದ್ದೇವೆ. 80 ಕೋಟಿ ಬಡವರಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ. ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದಿದೆ ಎಂದಿದ್ದಾರೆ.