ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೈಕಮಾಂಡ್ ನಾಯಕರಿಗೆ ಶಾಕ್ ಮೂಡಿಸಿದ್ದ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಈಗ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಬೆಚ್ಚಿಬೀಳುವಂತ ಆಘಾತ ನೀಡಿದ್ದಾರೆ.
ಗುಲಾಂ ನಬಿ ಅಜಾದ್ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ ಅವರ ಬೆಂಬಲಿಗರು ರಾಜೀನಾಮೆ ನೀಡಿದ್ದು, ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ 51 ಮಂದಿ ಸಾಮೂಹಿಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈವರೆಗೂ 64 ಮಂದಿ ರಾಜೀನಾಮೆ ನೀಡಿದ್ದು, ಗುಲಾಂ ನಬಿ ಅಜಾದ್ ಅವರ ಹೊಸ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಲಡಾಕ್‍ನ ಸಿಂಧೂ ನದಿ ಸಂಗಮ ಸ್ಥಳಕ್ಕೆ ಶೋಭಾ ಕರಂದ್ಲಾಜೆ ಭೇಟಿ
ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಎಲ್ಲ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಕಳೆದ ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಅಸಮರ್ಥ ನಾಯಕರು ಪಕ್ಷವನ್ನು ಸಮಗ್ರವಾಗಿ ನಾಶಪಡಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ – ಏಷ್ಯಾಗೆ ಇದು ಫಸ್ಟ್ ಟೈಂ
ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ಪ್ರಮುಖ ಕಾಂಗ್ರೆಸ್ ನಾಯಕರು, ನೂರಾರು ಪಂಚಾಯತ್ ರಾಜ್ ಸಂಸ್ಥೆ (ಪಿಆರ್‌ಐ) ಸದಸ್ಯರು, ಪುರಸಭೆ ಕಾರ್ಪೊರೇಟರ್‌ಗಳು, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಈಗಾಗಲೇ ಆಜಾದ್ ಪಕ್ಷ ಸೇರಲು ಕಾಂಗ್ರೆಸ್ ತೊರೆದಿದ್ದಾರೆ.