ಸಿದ್ದು, ಡಿಕೆಶಿಯಿಂದಲೇ ಕಾಂಗ್ರೆಸ್ ನಿರ್ನಾಮ: ಜಗದೀಶ್ ಶೆಟ್ಟರ್

Public TV
1 Min Read
jagadish shettar

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.

ಗೋಕಾಕ್ ನಗರದಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

jagadish shettar

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಿದ್ದು-ಡಿಕೆಶಿ ಸೇರಿಕೊಂಡು ಪಕ್ಷವನ್ನು ನಿರ್ನಾಮ ಮಾಡ್ತಾರೆ. ಈಗಾಗಲೇ ಪಂಜಾಬ್‌ನ ಸಿಧು ಜೈಲುಸೇರಿದ್ದಾರೆ. ಇಲ್ಲಿ ಸಿದ್ದು ಕಾಂಗ್ರೆಸ್ ಅನ್ನು ಸಂಪೂರ್ಣ ನೆಲಕ್ಕುರುಳಿಸುತ್ತಾರೆ ಎಂದು ಕುಟುಕಿದರು.

2023ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಸುಮಾರು 150 ಸ್ಥಾನಗಳನ್ನು ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ನಾರಾಯಣ ಗೌಡರಿಗೆ ಕೈ ಪಾಲಿಕೆ ಸದಸ್ಯರಿಂದ ಫುಲ್ ಕ್ಲಾಸ್

hubballi jagadish shettar

ಜೂನ್ 13ರಂದು ನಡೆಯುವ ಶಿಕ್ಷಕರ ಮತ್ತು ಪದವೀಧರ ಚುನಾವಣೆಯಲ್ಲಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಜಯಶಾಲಿಯಾಗಲಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿಲ್ಲ. ಈ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಈಗಾಗಲೇ ಶಿಕ್ಷಕರ ಪ್ರತಿನಿಧಿಯಾಗಿ ಅರುಣ ಶಹಾಪೂರ ಹಾಗೂ ಪದವೀಧರ ಕ್ಷೇತ್ರದಿಂದ ಹಣಮಂತ ನಿರಾಣಿ ಸ್ಪರ್ಧಿಸಿದ್ದು, ಅವರನ್ನು ಪ್ರಥಮ ಪ್ರಾಶಸ್ತ್ಯದ ಮೂಲಕ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *