ಮಡಿಕೇರಿ: ಬಿಜೆಪಿ (BJP) ಭದ್ರಕೋಟೆ ಕೊಡಗು (Kodagu) ಜಿಲ್ಲೆ ಮೇಲೆ ಕಾಂಗ್ರೆಸ್ (Congress) ಕಣ್ಣಿಟ್ಟಿದೆ. ಈ ಬಾರಿ ಶತಾಯಗತಾಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವ ಪಣತೊಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಗೆ ಮೊಟ್ಟೆ ಎಸೆತ ಪ್ರಕರಣದಿಂದ ರೊಚ್ಚಿಗೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಎಲ್ಲಾ ರೀತಿಯ ತಂತ್ರಗಾರಿಕೆ ನಡೆಸುತ್ತಿದ್ದಾರೆ.
Advertisement
ರಾಜ್ಯ ರಾಜಕೀಯದಲ್ಲಿ ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂದೇ ಖ್ಯಾತಿ. ಕೊಡವರ ನಾಡಲ್ಲಿ ಈ ಬಾರಿ ಶತಾಯಗತಾಯ ಕಾಂಗ್ರೆಸ್ ಅಭ್ಯರ್ಥಿಯನ್ನ ಗೆಲ್ಲಿಸಲು ಪಣತೊಟ್ಟಿರುವ ಕಾಂಗ್ರೆಸ್, ಸೂಕ್ತ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿದೆ. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಇದನ್ನೂ ಓದಿ: ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್?
Advertisement
Advertisement
ಹೆಚ್.ಸಿ.ಮಹದೇವಪ್ಪ (H.C Mahadevappa) ಮತ್ತು ಧ್ರುವನಾರಾಯಣ್ (Dhruvanarayan) ಕೊಡಗಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಮಡಿಕೇರಿ ಕ್ಷೇತ್ರದಿಂದ 7 ಜನ ಟಿಕೆಟ್‍ಗೆ ಅರ್ಜಿ ಹಾಕಿದ್ದಾರೆ. ಇತ್ತ ವಿರಾಜಪೇಟೆ ಕ್ಷೇತ್ರದಿಂದ 3 ಜನ ಅರ್ಜಿ ಹಾಕಿದ್ದಾರೆ. ಪೊನ್ನಣ್ಣ, ವೀಣಾ ಅಚ್ಚಯ್ಯ, ಜೀ ವಿಜಯ ಮಂಥರ್ ಗೌಡ ಸೇರಿದಂತೆ ಟಿಕೆಟ್ ಆಕಾಂಕ್ಷಿಗಳ ಅಭಿಪ್ರಾಯ ಕೂಡ ಸಂಗ್ರಹಿಸಲಾಗಿದೆ. ಇನ್ನು ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಿದ್ರೂ ಎಲ್ಲಾರೂ ಒಟ್ಟಾಗಿ ಕೆಲಸ ಮಾಡ್ತೇವೆ ಅಂತ ತಿಳಿಸಿದ್ದಾರೆ.
Advertisement
ಇತ್ತ ಈ ಬಾರಿ ಕೊಡಗು ಜಿಲ್ಲೆಯಲ್ಲಿ ಶತಾಯಗತಾಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು ಎಂದು ರಾಜ್ಯ ನಾಯಕರು ತೀರ್ಮಾನ ಮಾಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ (Siddaramaiah) ಅವರು ಮಳೆ ಹಾನಿ ಪ್ರದೇಶಗಳ ವೀಕ್ಷಣೆಗೆ ಬಂದ ಸಂದರ್ಭದಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದ ರೊಚ್ಚಿಗೆದ್ದಿರುವ ಕಾಂಗ್ರೆಸ್ ನಾಯಕರು, ಬಿಜೆಪಿ ಭದ್ರತೆಕೋಟೆಯನ್ನು ಹೇಗಿದ್ದರೂ ಮಾಡಿ ಛಿದ್ರಛಿದ್ರ ಮಾಡಬೇಕು ಎಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅಷ್ಟೇ ಇಲ್ಲದೇ ಈ ಭಾಗದಲ್ಲಿ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಎಲ್ಲಾರೂ ಚುನಾವಣೆ ಪ್ರಚಾರ ನಡೆಸಲ್ಲಿದ್ದಾರೆ ಅಂತ ಕೆಪಿಸಿಸಿ (KPCC) ಕಾರ್ಯದರ್ಶಿ ಲಕ್ಷ್ಮಣ್ ತಿಳಿಸಿದ್ದಾರೆ.
ಒಟ್ಟಿನಲ್ಲಿ ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ ಈ ಬಾರಿ ಆದ್ರೂ 2 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಪಕ್ಷಕ್ಕಾಗಿ ದುಡಿದಿರುವ, ಗೆಲ್ಲುವ ಅವಕಾಶ ಇರುವ ಮೂವರ ಹೆಸರು ಫೈನಲ್ ಮಾಡಲು ಅಭಿಪ್ರಾಯ ಕೂಡ ಸಂಗ್ರಹ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯ ಚಟುವಟಿಕೆಗಳು ಹೇಗೆ ಕೊಡಗಿನ ಮೇಲೆ ಪರಿಣಾಮ ಬೀರುತ್ತದೆ ಅಂತಾ ಕಾದು ನೋಡಬೇಕಿದೆ.