ನವದೆಹಲಿ: ಭಾರತೀಯ ಜನತಾ ಪಾರ್ಟಿ (BJP) ಯ ಐಟಿ ಸೆಲ್ (IT Cell) ಮುಖ್ಯಸ್ಥ ಅಮಿತ್ ಮಾಳವೀಯ (Amit Malaviya) ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ರಮೇಶ್ ಬಾಬು (Ramesh Babu) ಅವರು ಅಮಿತ್ ವಿರುದ್ಧ ದೂರು ನಿಡಿದ ಹಿನ್ನೆಲೆಯಲ್ಲಿ ಇದೀಗ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಜನವರಿಯವರೆಗೆ ಬಿಜೆಪಿಯವರು ಗ್ಯಾರಂಟಿ ಬಗ್ಗೆ ಮಾತನಾಡಬಾರದು: ಕಿಮ್ಮನೆ ರತ್ನಾಕರ್
Advertisement
Advertisement
ಏನಿದು ಪ್ರಕರಣ..?: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ರಮೇಶ್ ಬಾಬು ಹೈ ಗ್ರೌಂಡ್ಸ್ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ್ದರು. ಇದೀಗ ದೂರು ಸ್ವೀಕರಿಸಿಕೊಂಡ ಪೊಲೀಸರು ಅಮಿತ್ ಮಾಳವೀಯಾ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
Advertisement
ಪೋಸ್ಟ್ ನಲ್ಲಿ ಏನಿತ್ತು..?: ಅಮಿತ್ ಮಾಳವಿಯಾ ಪೋಸ್ಟ್ ಮಾಡಿರುವ ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖ ಮಾಡಲಾಗಿತ್ತು. ರಾಹುಲ್ ಗಾಂಧಿ (Rahul Gandhi) ವಿರುದ್ಧದ ವೀಡಿಯೋ ಪೋಸ್ಟ್ ಹಿನ್ನೆಲೆಯಲ್ಲಿ ಹೈಗ್ರೌಂಡ್ ಸ್ಟೇಷನ್ ನಲ್ಲಿ ಕಾಂಗ್ರೆಸ್ ದೂರು ಸಲ್ಲಿಕೆ ಮಾಡಿತ್ತು.
Advertisement
ದೂರಿನಲ್ಲೇನಿದೆ..?: ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹರಡಲೆಂದೇ ಬಳಸುತ್ತಿದ್ದಾರೆ. ರಾಹುಲ್ ಗಾಂಧಿಯವರ ಕುರಿತು ಸುಳ್ಳು ಜನಾಭಿಪ್ರಾಯ ಸೃಷ್ಠಿಸಲು ನೆಲದ ಕಾನೂನಿನ ಬಗ್ಗೆ ಗೌರವವೇ ಇಲ್ಲದಂತೆ ಟ್ವಿಟ್ಟರ್ ನಲ್ಲಿ ಸುಳ್ಳು ವೀಡಿಯೋವನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಹರಿಬಿಟ್ಟಿದ್ದಾರೆ ಎಂದು ಜೂನ್ 17ರಂದು ಸಚಿವ ಪ್ರಿಯಾಂಕ್ ಖರ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.