ಕಲಬುರಗಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ `ಗೃಹಜ್ಯೋತಿ’ ಯೋಜನೆಗೆ (Gruhajyothi Scheme) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ತವರು ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ, ಇವತ್ತಿನ ದಿನ ಐತಿಹಾಸಿಕ ದಿನ. ಜ್ಯೋತಿ ಬೆಳಗಿಸುವ ಮೂಲಕ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಚಾಲನೆ ನೀಡಿದ್ದೇವೆ. ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನ ಘೋಷಿಸಿ ರಾಜ್ಯದ ಜನರಿಗೆ ವಾಗ್ದಾನ ಮಾಡಿದ್ದೆವು. ನಾನು, ಡಿಕೆಶಿ ಗ್ಯಾರಂಟಿ ಕಾರ್ಡ್‌ಗೆ (Guarantee Card) ಸಹಿ ಮಾಡಿ ಹಂಚಿದ್ದೆವು. ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Gruhajyothi Scheme: ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಿಎಂ
Advertisement
Advertisement
ಈ ಹಿಂದೆ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರದಲ್ಲಿದ್ದಾಗ 160 ಭರವಸೆಗಳಲ್ಲಿ 145 ಭರವಸೆಗಳನ್ನ ಈಡೇರಿಸಿದ್ದೇವೆ. ಈ ಬಾರಿಯೂ ಮುಂದಿನ 5 ವರ್ಷದಲ್ಲಿ ನಮ್ಮ ಪ್ರಣಾಳಿಕೆಯ ಎಲ್ಲಾ ಅಂಶ ಜಾರಿಗೆ ತರುತ್ತೆವೆ ಎಂದು ಭರವಸೆ ನೀಡಿದರು.
Advertisement
ಈ ಐದು ಗ್ಯಾರಂಟಿ ಕೊಟ್ಟರೆ, ದೇಶ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದು ಪ್ರಧಾನಿ ಮೋದಿ (Narendra Modi) ಹೇಳಿದ್ದಾರೆ. ನಾವು ಐದು ಗ್ಯಾರಂಟಿ ಕೊಟ್ಟು ಆರ್ಥಿಕ ಶಿಸ್ತನ್ನೂ ಕೊಡುತ್ತೆವೆ. ಪ್ರಧಾನಿಮೋದಿ ಅವರು ರಾಜ್ಯದ ಎಲ್ಲಾ ಯೋಜನೆಗಳನ್ನ ಸಹ ನಿಲ್ಲಿಸುತ್ತಾರೆ. ಈ ರಾಜ್ಯದಲ್ಲಿ ದುರಾಡಳಿತ ಮಾಡಿ ಲೂಟಿ ಮಾಡಿ ಈ ರಾಜ್ಯದ ಜನರಿಗೆ ಅನ್ಯಾಯ ಮಾಡಿದವರು ಬಿಜೆಪಿ. ನಾವು ಅಧಿಕಾರದಲ್ಲಿದ್ದಾಗ 16 ಲಕ್ಷ ಮನೆ ಕಟ್ಟಿಸಿದ್ದಿವಿ. ಆದ್ರೆ ಬಿಜೆಪಿ ಅವರು ಕೇವಲ 8 ಲಕ್ಷ ಮನೆ ಕಟ್ಟಿಸಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ
Advertisement
ಕೇಂದ್ರದ ಮೋದಿ ಸರ್ಕಾರ, ರಾಜ್ಯದಲ್ಲಿದ್ದ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದಿಂದ ನಾವು ಆರ್ಥಿಕವಾಗಿ ಹಿಂದೆ ಹೋಗಿದ್ದೆವೆ. ಆದ್ರೆ ಕಾಂಗ್ರೆಸ್ ಜಾರಿಗೆ ತಂದ ಶಕ್ತಿ ಯೋಜನೆಯಿಂದ ಪ್ರತಿದಿನ 50 ಲಕ್ಷ ಹೆಣ್ಣುಮಕ್ಕಳು ಬಸ್ ನಲ್ಲಿ ಉಚಿತ ಸಂಚಾರ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿ ಅವರಿಗೆ ಹೊಟ್ಟೆ ಉರಿ ಬಂದಿದೆ. ಬಿಜೆಪಿಯವರಿಗೆ ತಾಕತ್ತಿದ್ದರೆ ಇಡೀ ದೇಶದಲ್ಲಿ ಈ ಯೋಜನೆ ಜಾರಿ ಮಾಡಲಿ ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸವಾಲ್ ಹಾಕಿದರು.
ನಾವು ನುಡಿದಂತೆ ನಡೆದಿದ್ದೇವೆ. 200 ಯೂನಿಟ್ ಉಚಿತ ವಿದ್ಯುತ್ ಅಂತಾ ಹೇಳಿದ್ದೇವೆ. 2.14 ಕೋಟಿ ನೋಂದಣಿ ಮಾಡಿಕೊಳ್ಳಬೇಕಾದವರಿದ್ದಾರೆ. ಈಗಾಗಲೇ 1.40 ಕೋಟಿ ಮಂದಿ ನೋಂದಣಿ ಮಾಡಿಸಿದ್ದಾರೆ. ಇದೇ ತಿಂಗಳಿAದ ಶೂನ್ಯ ಬಿಲ್ ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24 ರಂದು ಚಾಲನೆ ಕೊಡ್ತೀವಿ. ನಿಜವಾಗಿಯೂ ಬಡವರ ವಿರೋಧಿ ಕೆಲಸ ಮಾಡ್ತಿರೋದು ಬಿಜೆಪಿಯವರು. ಎಫ್‌ಸಿಐ ಅಕ್ಕಿ ಕೊಡ್ತೀವಿ ಅಂದ್ರೂ ಕೇಂದ್ರ ಬಿಜೆಪಿ ಸರ್ಕಾರ ಬಿಡಲಿಲ್ಲ. ಒಂದು ಕೆಜಿ ಅಕ್ಕಿ ಕಡಿಮೆ ಮಾಡಿದ್ರೂ ಹೋರಾಟ ಮಾಡ್ತೀವಿ ಅನ್ನೋ ಈಶ್ವರಪ್ಪ, ಯಡಿಯೂರಪ್ಪ ಅವರು ಅಕ್ಕಿ ಕಡಿಮೆ ಮಾಡಿದಾಗ ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದ್ದಾರೆ.
Web Stories