ಚಾಮರಾಜನಗರ: ಭಾರತ್ ಜೋಡೋ ಯಾತ್ರೆ (Bharat Jodo Yatra) ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ (Congress) ವತಿಯಿಂದ ಅಳವಡಿಸಿದ್ದ ʼಕೈʼ ನಾಯಕರ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದಕ್ಕೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಕಿಡಿಕಾರಿದರು.
ಗುಂಡ್ಲುಪೇಟೆ ಪೊಲೀಸ್ ಠಾಣೆಗೆ (Police Station) ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ, ಕೂಡಲೇ ಅವರನ್ನು ಬಂಧಿಸಬೇಕು. ಕಿಡಿಗೇಡಿಗಳ ಬಂಧನವಾಗಿಲ್ಲ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಪೊಲೀಸರಿಗೆ ವಾರ್ನಿಂಗ್ ಕೊಟ್ಟರು.
Advertisement
Advertisement
ನಾವು ಕದ್ದೇನೂ ಕಾರ್ಯಕ್ರಮ ಮಾಡುತ್ತಿಲ್ಲ, ಅವರ ರಾಜಕಾರಣ ಏನಿದೆ ಅದನ್ನು ಮಾಡಲಿ, ಈ ಹೇಡಿತನ ನಾವು ಮಾಡಿಲ್ಲ. ಕ್ರಮ ತೆಗೆದುಕೊಂಡಿಲ್ಲ ಅಂದ್ರೆ ನಮ್ಮ ರಾಜಕಾರಣ ನಾವೂ ಮಾಡುತ್ತೇವೆ ಎಂದು ಗುಡುಗಿದರು. ಇದನ್ನೂ ಓದಿ: RSS ಬ್ಯಾನ್ ವಿಚಾರ – ಸಿದ್ದರಾಮಯ್ಯಗೆ ತಲೆಕೆಟ್ಟಿದೆ ಎಂದು ಅಪ್ಪಚ್ಚು ರಂಜನ್ ಕಿಡಿ
Advertisement
Advertisement
ಘಟನೆಯೇನು?: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಕೆಕ್ಕನಹಳ್ಳ ಚೆಕ್‌ಪೋಸ್ಟ್ ಮೂಲಕ ರಾಜ್ಯ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದ ಬಳಿ ನಡೆಯಲಿರುವ ವೇದಿಕೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗಿದೆ. ಕಾಂಗ್ರೆಸ್ ನಾಯಕರ ಫ್ಲೆಕ್ಸ್‌ಗಳ ಮೂಲಕ ರಾಹುಲ್ ಗಾಂಧಿಗೆ ಸ್ವಾಗತ ಕೋರಲು ಸಜ್ಜಾಗಿದ್ದಾರೆ. ಆದರೆ ನಿನ್ನೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪಕ್ಷದವರು ಹಾಕಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದರು. ಇದನ್ನೂ ಓದಿ: ಪಿಎಫ್‍ಐ ಬ್ಯಾನ್ ವಿರೋಧಿಸಿದರೆ ಜನ ಒದೆಯುತ್ತಾರೆ – ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ