– ಮೋದಿ ವಿರುದ್ಧ ಕೈ ನಾಯಕಿ ಮತ್ತೆ ಕಿಡಿ
ಲಕ್ನೋ: ಸಾಯುವ ಮೊದಲು ʻಹೇ ರಾಮ್ʼ ಎಂದು ಘೋಷಣೆ ಕೂಗಿದ ಮಹಾತ್ಮ ಗಾಂಧಿಯವರ ಆದರ್ಶವನ್ನು ಕಾಂಗ್ರೆಸ್ ಅನುಸರಿಸುತ್ತದೆ. ಆದ್ರೆ ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ತಿರಸ್ಕರಿಸಿದ ಕಾರಣಕ್ಕೆ ಮೋದಿ (PM Modi) ಕಾಂಗ್ರೆಸ್ ಅನ್ನು ಧರ್ಮ ವಿರೋಧಿ ಎಂದು ಆರೋಪಿಸುವುದು ತಪ್ಪು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅಸಮಾಧಾನ ಹೊರಹಾಕಿದ್ದಾರೆ
Advertisement
ರಾಯ್‌ಬರೇಲಿ ಕ್ಷೇತ್ರದ ʻಚೌಡಾ ಮಿಲ್ ವೃತ್ತದಲ್ಲಿʼ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಯುವ ಮುನ್ನ ʻಹೇ ರಾಮ್ʼ ಘೋಷಣೆ ಕೂಗಿದ ಮಹಾತ್ಮ ಗಾಂಧಿ (Mahatma Gandhi) ಅವರ ಆದರ್ಶವನ್ನು ಕಾಂಗ್ರೆಸ್ ಪಕ್ಷವು ಪಾಲಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿ ಬಳಿಕ ಬದಲಾಯ್ತು ಕ್ಷೌರದಂಗಡಿ ಲಕ್ – ಅಂಗಡಿಗೆ ಗ್ರಾಹಕರ ದಂಡು
Advertisement
ಹಿಂದೂ ಧರ್ಮದ (Hindu Religion) ಚಾಂಪಿಯನ್, ಗೋ ರಕ್ಷಕರು ಎಂದು ಬಿಜೆಪಿ ಹೇಳಿಕೊಳ್ಳುತ್ತದೆ. ಆದ್ರೆ ತಮ್ಮದೇ ಪಕ್ಷ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿ ಗೋಶಾಲೆಗಳ ಸ್ಥಿತಿ ದಯನೀಯವಾಗಿದೆ. ಗೋ ಶಾಲೆಗಳಲ್ಲಿ (Cowsheds) ಸತ್ತಿರುವ ಹಸುಗಳ ಮಾಂಸವನ್ನು ನಾಯಿಗಳು ತಿನ್ನುತ್ತಿವೆ. ಅಷ್ಟೊಂದು ದಯನೀಯ ಸ್ಥಿತಿ ತಲುಪಿದೆ. ಆದ್ರೆ ಕಾಂಗ್ರೆಸ್ ಆಡಳಿತದಲ್ಲಿರುವ ಛತ್ತೀಸ್‌ಗಢದಲ್ಲಿ ಗೋಶಾಲೆಗಳ ಸ್ಥಿತಿ ಸುಧಾರಣೆಯಾಗಿದೆ. ಗೋಶಾಲೆಗಳನ್ನು ನಡೆಸುತ್ತಿರುವ ಸ್ವಸಹಾಯ ಗುಂಪುಗಳಿಗೂ ಅನುಕೂಲವೇ ಆಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಇನ್ನೂ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರಸ್ತಾಪಿಸಿದರು. ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಕೊಟ್ಟ ಭರವಸೆಗಳನ್ನು ಈಡೇರಿಸಲಿದೆ. ಉತ್ತರ ಪ್ರದೇಶದಲ್ಲಿ ಪದೇ ಪದೇ ಆಗುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್ ಹಾಕಲಿದೆ. ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಲಿದೆ. ಮುಖ್ಯವಾಗಿ ಸಣ್ಣ ಉದ್ಯಮಿಗಳ ಸಹಾಯಕ್ಕಾಗಿ 5,000 ಕೋಟಿ ರೂ. ನಿಧಿಯನ್ನು ರಚಿಸಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣದಲ್ಲಿ ಅವರ ಕುಟುಂಬದವರೇ ಶಾಸಕ, ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಪ್ರಿಯಾಂಕ್ ಖರ್ಗೆ