– ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ
ತುಮಕೂರು: ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ನಾವು ನೆಲಕಚ್ಚಿದ್ದೇವೆ. ಹೀಗಿರುವಾಗ ಸಿಎಂ ಅವರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ, ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಶಾಸನ ಸಭೆಯಲ್ಲಿ ಮಾತನಾಡುವುದು ಶಾಸಕರ ಹಕ್ಕು. ಹಾಗಂತ ಸುಖಾಸುಮ್ಮನೆ ಕಾಲ ಹರಣ ಮಾಡಬಾರದು. ಈಗ ಶಾಸಕರು ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸರ್ಕಾರ ಉಳಿಯಬಾರದು. ಸರ್ಕಾರ ಉರುಳಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.
Advertisement
Advertisement
ಬಿಜೆಪಿಯವರಿಗೆ ಬೈದರೇ ಮಾತ್ರ ಮುಸ್ಲಿಮರು ಕಾಂಗ್ರೆಸ್‍ಗೆ ವೋಟ್ ಹಾಕುತ್ತಾರೆ. ಹಾಗಾಗಿ ಕಾಂಗ್ರೆಸ್-ಜೆಡಿಎಸ್ ಜಗಳ ಇದಾಗಿದ್ದರೂ ಬಿಜೆಪಿಗೆ ಬೈಯೋದು. ಯಾವುದೇ ಕಾರಣಕ್ಕೂ ಬಹುಮತ ಬರುವುದಿಲ್ಲ. ಈ ಸರ್ಕಾರ ಕಾಂಗ್ರೆಸ್‍ನ ಒಂದಿಬ್ಬರು ಶಾಸಕರು ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದವರಿಗೆ ಮಾತ್ರ ಬೇಕಾಗಿದೆ. ಇನ್ನೂ ಕೆಲವು ದೋಸ್ತಿ ಶಾಸಕರು ರಾಜೀನಾಮೆ ನೀಡಲಿದ್ದಾರೆ. ಹೆಸರು ಹೇಳಿದರೆ ಅವರು ಅಲರ್ಟ ಆಗುತ್ತಾರೆ. ಹೀಗಾಗಿ ಅವರ ಹೆಸರು ಹೇಳುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.
Advertisement
1989ರಲ್ಲಿ 20 ಜನ ಶಾಸಕರಿಗೆ ರಾಜೀನಾಮೆ ಕೊಡಿಸಿ ಎಚ್.ಡಿ.ದೇವೇಗೌಡ ಅವರು ಎಸ್.ಆರ್. ಬೊಮ್ಮಯಿಯವರ ಸರ್ಕಾರ ಉರುಳಿಸಿದರು. ಆಗ ದೇವೇಗೌಡರಿಗೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿರಲಿಲ್ಲ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.