Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತ್‍ ನಲ್ಲಿ ಬಿಜೆಪಿ ಗೆಲುವಿಗೆ ರೆಡ್ ಕಾರ್ಪೆಟ್ ಹಾಕಿಕೊಟ್ಟಿದ್ದೇ ಕಾಂಗ್ರೆಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗುಜರಾತ್‍ ನಲ್ಲಿ ಬಿಜೆಪಿ ಗೆಲುವಿಗೆ ರೆಡ್ ಕಾರ್ಪೆಟ್ ಹಾಕಿಕೊಟ್ಟಿದ್ದೇ ಕಾಂಗ್ರೆಸ್!

Latest

ಗುಜರಾತ್‍ ನಲ್ಲಿ ಬಿಜೆಪಿ ಗೆಲುವಿಗೆ ರೆಡ್ ಕಾರ್ಪೆಟ್ ಹಾಕಿಕೊಟ್ಟಿದ್ದೇ ಕಾಂಗ್ರೆಸ್!

Public TV
Last updated: December 18, 2017 12:30 pm
Public TV
Share
4 Min Read
modi red carpet
SHARE

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದ ಹಿನ್ನೆಲೆಯಲ್ಲಿ ಈ ಗೆಲುವಿಗೆ ಕಾಂಗ್ರೆಸ್ ಎಡವಟ್ಟುಗಳೇ ಕಾರಣ ಎನ್ನುವ ವಿಚಾರದ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಮಣಿ ಶಂಕರ್ ಹೇಳಿಕೆಗೆ ಗುಜರಾತ್ ಜನ ಬ್ಯಾಲೆಟ್ ಬಾಕ್ಸ್ ನಲ್ಲಿ ಉತ್ತರ ನೀಡುತ್ತಾರೆ ಎಂದು ಭಾಷಣ ಮಾಡಿ ಮೋದಿ ನುಡಿದ ಭವಿಷ್ಯ ನಿಜವಾಗಿದೆ.

ಹೌದು. ಮೊದಲ ಹಂತದ ಚುನಾವಣಯ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆಬೀಳುವ ಮುನ್ನ ಭಾರೀ ವಾಕ್ಸಮರ ನಡೆದಿತ್ತು. ಪ್ರಧಾನಿ ಮೋದಿ ಅವರನ್ನು ಮಾನಸಿಕವಾಗಿ ಆಘಾತಗೊಳಿಸುವ ಕಾಂಗ್ರೆಸ್ ಯತ್ನದ ಮುಂದುವರಿದ ಭಾಗವಾಗಿ 2014ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಅಭ್ಯರ್ಥಿ ಮೋದಿಯನ್ನು ಚಾಯ್‍ವಾಲಾ ಎಂದು ಹೀಗಳೆದಿದ್ದ ಮಣಿಶಂಕರ್ ಅಯ್ಯರ್ ಹರಕುಬಾಯಿಯನ್ನು ಹರಿಬಿಟ್ಟು ವಿವಾದಕ್ಕೆ ಕಾರಣರಾಗಿದ್ದರು.

mani shankar narendra modi

ತಾನೊಬ್ಬ ಶಿವಭಕ್ತ ಎನ್ನುತ್ತಿರುವ ಕಾಂಗ್ರೆಸ್‍ ನವರಿಗೆ ಈಗ ಬಾಬಾ ಸಾಹೇಬ್‍ಗಿಂತ ಬಾಬಾ ಬೋಲೆ ಅಂದ್ರೆ ಶಿವನ ನೆನಪು ಆಗುತ್ತಿದೆ ಎಂದು ಹೇಳಿ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡುವ ಯತ್ನದಲ್ಲಿ ಮೋದಿಯೊಬ್ಬ `ನೀಚ ಮನುಷ್ಯ’, ಅವರಿಗೆ ಮೌಲ್ಯಗಳೇ ಇಲ್ಲ. ಅಂಥವರ ಬಗ್ಗೆ ಏನು ಹೇಳಲಿಕ್ಕೆ ಆಗುತ್ತೆ ಎಂದು ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ನಾಲಿಗೆಯನ್ನು ಹರಿಯಬಿಟ್ಟಿದ್ದರು.

ಈ ಹೇಳಿಕೆಗೆ ಸೂರತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇದು `ಗುಜರಾತ್ ಜನರಿಗೆ ಮಾಡಿದ ಅವಮಾನ’ ಎಂದು ತಿರುಗೇಟು ನೀಡಿದ್ದರೆ, ಪ್ರಧಾನಿ ವಿರುದ್ಧದ ಇಂಥ ಹೇಳಿಕೆಗಳು ನಾಚಿಕೆಗೇಡು. `ಮೊಘಲ್ ಮನಸ್ಥಿತಿ’ ಅಂತ ಸಚಿವ ರವಿಶಂಕರ್ ಪ್ರಸಾದ್ ಕಿಡಿ ಕಾರಿದದ್ದರು.

ಈ ವಿಚಾರ ದೊಡ್ಡದಾಗುತ್ತಿದ್ದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ಮಣಿಶಂಕರ್ ಅಯ್ಯರ್ ಬಳಸಿದ ಭಾಷೆ ಸರಿಯಲ್ಲ, ಕಾಂಗ್ರೆಸ್ ಈ ಸಂಸ್ಕೃತಿಯನ್ನು ಬಯಸುವುದಿಲ್ಲ. ಹೀಗಾಗಿ ಮಣಿಶಂಕರ್ ಅಯ್ಯರ್ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ಮಣಿಶಂಕರ್ ಅಯ್ಯರ್ ಪ್ರತಿಕ್ರಿಯಿಸಿ ಕ್ಷಮೆ ಕೇಳಿ ನಾನು ಆ ಪದವನ್ನು ಜಾತಿ ಆಧಾರದಲ್ಲಿ ಬಳಸಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ತನ್ನ ವಿರುದ್ಧ ಮಾತನಾಡಿದವರ ಹೇಳಿಕೆಯನ್ನು ಬಳಸಿಕೊಂಡೇ ಅವರಿಗೆ ತಿರುಗೇಟು ನೀಡುವ ಅಭ್ಯಾಸ ಮಾಡಿಕೊಂಡಿರುವ ಮೋದಿ ಅಯ್ಯರ್ ಹೇಳಿಕೆಯನ್ನೇ ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದರು. ಹೌದು ನಾನು, ಕೆಳ ವರ್ಗದಲ್ಲಿ ಜನಿಸಿದ ವ್ಯಕ್ತಿ. ನನ್ನ ಜೀವನದ ಪ್ರತಿಕ್ಷಣವನ್ನು ಬಡವರ ಏಳಿಗೆಗಾಗಿ ಮುಡುಪಾಗಿಟ್ಟಿದ್ದೇನೆ. ಬಡವರು, ದಲಿತರು, ಬುಡಕಟ್ಟು ಜನಾಂಗ ಮತ್ತು ಹಿಂದೂಳಿದ ವರ್ಗಗಳ ಅಭಿವೃದ್ಧಿಗಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಅವರು ತನ್ನ ಬಗ್ಗೆ ಏನು ಬೇಕಾದರೂ ಹೇಳಲಿ ನಾನು ನನ್ನ ಕೆಲಸವನ್ನು ಮಾಡುತ್ತಿರುತ್ತೇನೆ. ನನ್ನ ಕೆಲಸ ಮೇಲ್ಮಟ್ಟ(ಉಂಚ್)ದಲ್ಲಿದೆ. ಅಯ್ಯರ್ ಹೇಳಿಕೆ ಗುಜರಾತ್ ಜನತೆಗೆ ಮಾಡಿದ ಅವಮಾನ. ಇದಕ್ಕೆ ಜನ ಬ್ಯಾಲೆಟ್ ಬಾಕ್ಸ್ ನಲ್ಲಿ ಸರಿಯಾದ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿ ವಾಗ್ದಾಳಿ ನಡೆಸಿದ್ದರು.

ಇಷ್ಟೇ ಅಲ್ಲದೇ ಟಿವಿ ವರದಿಗಳನ್ನು ಆಧಾರಿಸಿ ನರೇಂದ್ರ ಮೋದಿ, ಗುಜರಾತ್ ಜನತೆಗೆ ಅವಮಾನ ಮಾಡಿದ ಅದೇ ಮಣಿಶಂಕರ್ ಅಯ್ಯರ್, ಪಾಕಿಸ್ತಾನದ ಹೈಕಮೀಷನರ್, ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ, ಭಾರತದ ಮಾಜಿ ಉಪರಾಷ್ಟ್ರಪತಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುಪ್ತ ಸಭೆ ನಡೆಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಬಗ್ಗೆ ಚರ್ಚೆ ನಡೆಸಿದ್ದರೆ ಎಂದು ಗಂಭೀರ ಆರೋಪ ಮಾಡಿದ್ದರು.

ಪಾಠ ಕಲಿಯದ ಕಾಂಗ್ರೆಸ್:
ಒಮ್ಮೆ ಇತಿಹಾಸವನ್ನು ನೋಡಿದಾಗ ಯಾವ ಪದ ಬಳಸಿ ಲೇವಡಿ ಮಾಡಲಾಗುತ್ತದೋ ಆ ಪದ ಮೋದಿ ಅವರ ಯಶಸ್ಸಿಗೆ ಕಾರಣವಾಗುತ್ತದೆ. ಮೋದಿ ವಿರುದ್ಧ ವೈಯಕ್ತಿಕವಾಗಿ ದಾಳಿ ಮಾಡಿದಾಗ ಆ ದಾಳಿಗಳು ಮೋದಿ ಪರ ಅಲೆಯನ್ನು ಸೃಷ್ಟಿ ಮಾಡಿರುವುದು ನಮ್ಮ ಕಣ್ಣ ಮುಂದಿದೆ. 2007ರಲ್ಲಿ ಸೋನಿಯಾ ಗಾಂಧಿ ಮೌತ್ ಕಾ ಸೌದ್ಗಾರ್ (ಸಾವಿನ ಏಜೆಂಟ್) ಎಂದು ಮೋದಿಯನ್ನು ಟೀಕಿಸಿದ್ದರು. ಇದನ್ನೇ ಬಳಸಿಕೊಂಡಿದ್ದ ಮೋದಿ ಅಂದು ಗುಜರಾತ್ ವಿಧಾನಸಭೆ ಚುನಾವಣೆ ಹಿಂದೂ ಮತಗಳನ್ನು ಧ್ರುವೀಕರಣ ಮಾಡಿಕೊಂಡು ಗೆಲವು ಸಾಧಿಸಿ ಸಿಎಂ ಆಗಿದ್ದರು.

2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಚಾಯ್ ವಾಲಾ ಎಂದು ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಹೆಸರಿನಲ್ಲಿ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮನಸಿನಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಗಿತ್ತು.

modi congress Chaiwala

ಈ ಚುನಾವಣೆಯಲ್ಲೇ ಯುವ ಕಾಂಗ್ರೆಸ್ ಕೆಲ ದಿನಗಳ ಹಿಂದೆ ಚಾಯ್‍ವಾಲಾ ಎಂದು ಬಿಂಬಿಸಿ ಗ್ರಾಫಿಕ್ಸ್ ಮಾಡಿದ ಫೋಟೋ ಒಂದನ್ನು ಟ್ವೀಟ್ ಮಾಡಿತ್ತು. ಈ ಟ್ವೀಟ್ ಗೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅದನ್ನು ಡಿಲೀಟ್ ಮಾಡಿತ್ತು. ಆದರೆ ಇದನ್ನೆ ಬಳಸಿಕೊಂಡ ಮೋದಿ ಹೌದು ನಾನು ಚಾಯ್‍ವಾಲ. ಚಹಾ ಮಾರಾಟ ಮಾಡಿದ್ದೇನೆ. ಆದರೆ ನಿಮ್ಮಂತೆ ನಾನು ದೇಶ ಮಾರಾಟ ಮಾಡಿಲ್ಲ. ಬೇಕಾದ್ರೆ ನೀವು ಚಹಾ ಮಾರಾಟ ಮಾಡಿ ದೇಶ ಮಾತ್ರ ಮಾರಬೇಡಿ ಎಂದು ಹೇಳಿ ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೇ ಈ ಚುನಾವಣೆ ಸಂದರ್ಭದಲ್ಲಿ ನಡೆದ ಮನ್ ಕೀ ಬಾತ್ ಕಾರ್ಯಕ್ರಮವನ್ನು ಗುಜರಾತ್ ಬಿಜೆಪಿ ನಾಯಕರು ಚಹಾ ಕುಡಿಯುತ್ತಾ ಕೇಳಿ ಕಾಂಗ್ರೆಸ್ ತಿರುಗೇಟು ನೀಡಿದ್ದರು.

ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಮೋದಿ ಚಹಾ ಮಾರಾಟ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಆರ್ ಟಿಐ ಅಡಿಯಲ್ಲಿ ಕೇಳಲಾದ ಪ್ರಶ್ನೆಗೆ ರೈಲ್ವೇ ಇಲಾಖೆ ನೀಡಿದ ಸುದ್ದಿಯನ್ನು ಟ್ವೀಟ್ ಮಾಡಿ ಮೋದಿ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.

ಚಾಯ್ ಪೇ ಚರ್ಚಾ ಐಡಿಯಾ ಕೊಟ್ಟಿದ್ದು ಯಾರು?
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರಾಜಕೀಯ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡಿದ್ದರು. ಮಣಿಶಂಕರ್ ಅಯ್ಯರ್ ಟೀಕೆಗೆ ಸರಿಯಾಗಿಯೇ ತಿರುಗೇಟು ನೀಡಲು ಪ್ರಶಾಂತ್ ಕಿಶೋರ್ ಬಿಜೆಪಿ ನಾಯಕರಿಗೆ ಚಾಯ್ ಪೇ ಚರ್ಚಾ ನಡೆಸಲು ಸಲಹೆ ನೀಡಿದ್ದರು. ಈ ಸಲಹೆ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿಯನ್ನು ತೊರೆದಿದ್ದರು. ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪರ ಕೆಲಸ ಮಾಡಿ ಜೆಡಿಯು, ಕಾಂಗ್ರೆಸ್, ಆರ್‍ಜೆಡಿ ಮೈತ್ರಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗುಜರಾತ್, ಬಿಹಾರದಲ್ಲಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ಉತ್ತರಪ್ರದೇಶಲ್ಲಿ ವಿಫಲವಾಗಿತ್ತು

 

chaiwala amith shaw

modi ramya tweet

MODI 3

MODI 4

MODI 5

MODI 1

 

TAGGED:gujaratManiShankarmodiPublic TVtweetwinಗುಜರಾತ್ಗೆಲವುಟ್ವೀಟ್ಪಬ್ಲಿಕ್ ಟಿವಿಬಿಜೆಪಿಮಣಿಶಂಕರ್ಮೋದಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
2 hours ago
01
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-1

Public TV
By Public TV
2 hours ago
02
Big Bulletin

ಬಿಗ್‌ ಬುಲೆಟಿನ್‌ 01 May 2026 ಭಾಗ-2

Public TV
By Public TV
2 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
2 hours ago
Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?