ರಾಮನಗರ: ರಾಮನಗರ (Ramanagara) ಸೇರಿದಂತೆ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಗಿಫ್ಟ್ ಕೂಪನ್‌ಗಳನ್ನು (Gift Coupon) ಹಂಚಿ ವ್ಯಾಪಕ ಅಕ್ರಮ ನಡೆಸಿತ್ತು. ಉಪ ಚುನಾವಣೆಯಲ್ಲಿಯೂ (By Election) ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ.
ಚನ್ನಪಟ್ಟಣದಲ್ಲಿ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ 3 ಸಾವಿರ, 5 ಸಾವಿರ ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್‌ಗಳನ್ನು ಬೆಂಗಳೂರಿನ ಲೂಲೂ ಮಾಲ್‌ಗೆ ಹೋಗಿ ಕೊಡಿ. ನಿಮಗೆ ಬೇಕಾದ ವಸ್ತುವನ್ನು ಖರೀದಿ ಮಾಡಿ ಎಂದು ಆಮಿಷ ಒಡ್ಡಿದ್ದರು. ಇದನ್ನು ನಂಬಿ ಕೂಪನ್ ಹಿಡಿದುಕೊಂಡು ಲೂಲೂ ಮಾಲ್‌ಗೆ ಹೋದರೆ ಅಲ್ಲಿ ಕೂಪನ್ ಇಲ್ಲ, ವಸ್ತುಗಳೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ; ಯಾವ ಕ್ಷೇತ್ರದಲ್ಲಿ ಯಾರಿಗೆ ಪ್ರಶಸ್ತಿ – ಇಲ್ಲಿದೆ ಪಟ್ಟಿ
Advertisement
Advertisement
ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ ಯಾರೂ ಮರುಳಾಗಾಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಈ ಬಾರಿ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ
Advertisement