ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ (Ayodhya Ram Mandir) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಳು ಇಚ್ಚಿಸುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಹೈಕಮಾಂಡ್ (Congress High Command) ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಹೈಕಮಾಂಡ್ ಗುರುವಾರ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತನ್ನ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಿತು. ಸಭೆಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟನೆ ಕೇಳಿದರು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ನಾಯಕರು ಭಾಗವಹಿಸಬಹುದಾಗಿ ತಿಳಿಸಿದೆ ಎಂದು ಹೇಳಲಾಗಿದೆ.
Advertisement
Advertisement
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು, ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲ. ದೇವಸ್ಥಾನದಲ್ಲಿ ಪಾರ್ಥನೆ ಸಲ್ಲಿಸಲು ಬಯಸುವವರು ಸ್ವತಂತ್ರವಾಗಿ ಹೋಗಿಬರಬಹುದು ಎಂದು ತಿಳಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
Advertisement
ಮೂಲಗಳ ಪ್ರಕಾರ, ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಮತ್ತು ಬಿಹಾರ ಘಟಕದ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್ ಕ್ರಮವಾಗಿ ಜನವರಿ 20 ಮತ್ತು 21 ರಂದು ರಾಮಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಆಹ್ವಾನ- ಧನ್ಯವಾದವೆಂದ ಕಾಂಗ್ರೆಸ್
Advertisement
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಹಾಜರಾಗುವಂತೆ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಆದ್ರೆ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಮಾಹಿತಿ ಖಚಿತವಾಗಿಲ್ಲ. ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ದಿನಗಣನೆ- ಅಂತಿಮ ಹಂತದಲ್ಲಿ ತಯಾರಿ, ವಿಶೇಷ ಸಾರಿಗೆ ವ್ಯವಸ್ಥೆ