ಕಲಬುರಗಿ: ರಾಜ್ಯದಲ್ಲಿ ಭೀಕರ ಬರ ಬಂದಿದೆ. ರೈತರಿಗೆ (Farmers) ಪರಿಹಾರ ನೀಡುವ ಬದಲು ಕಾಂಗ್ರೆಸ್ (Congress) ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುವಲ್ಲಿ ನಿರತವಾಗಿದ್ದು, ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ (BC Patil) ಕಿಡಿಕಾರಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಪಂಚ್ ಗ್ಯಾರಂಟಿಗಳಲ್ಲಿ ಮುಳುಗಿ ಹೋಗಿದೆ. ನಾವು ಅಧಿಕಾರದಲ್ಲಿದ್ದಾಗ ರೈತರಿಗೆ ಸಾಕಷ್ಟು ಪರಿಹಾರ ಕೊಟ್ಟಿದ್ದೇವೆ. ಆದರೆ ಕಾಂಗ್ರೆಸ್ ಸರ್ಕಾರ ರೈತರಿಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ
ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ. ರಾಜ್ಯ ಸರ್ಕಾರ ದಿವಾಳಿ ಆಗಿದೆ. ಅಭಿವೃದ್ಧಿ ಮಾಡದ ಸರ್ಕಾರ ಯಾಕೆ ಬೇಕು? ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಬ್ಯಾಲೆನ್ಸ್ ತಪ್ಪಿದೆ. ಅವರಲ್ಲಿ ಒಳಜಗಳ ಹೆಚ್ಚಾಗಿದೆ. ಸರ್ಕಾರ ಚೇಂಜ್ ಆದರೆ ಕಾಂಗ್ರೆಸ್‌ನವರಿಂದಲೇ ಆಗಬೇಕು. ಬೇರೆಯವರಿಂದ ಆಗಲ್ಲ ಎಂದರು. ಇದನ್ನೂ ಓದಿ: ವರಿಷ್ಠರೇ ಎಲ್ಲಾ ಮಾಡೋದಾದ್ರೆ ನೀವೇನು ಬೆರಳು ಚೀಪ್ತಿದ್ರಾ – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಚ್ಚಾಟವನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಭಿವೃದ್ಧಿಗೆ ಆದ್ಯತೆ ನೀಡದ ಸರ್ಕಾರಕ್ಕೆ ರಾಜ್ಯದ ಜನರೇ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗೇ ಸಾಯುತ್ತೇನೆ: ಸಿ.ಟಿ ರವಿ