Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹತೋಟೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ಕೇಂದ್ರ ಮಧ್ಯಪ್ರವೇಶಕ್ಕೆ ಈರಣ್ಣ ಕಡಾಡಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹತೋಟೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ಕೇಂದ್ರ ಮಧ್ಯಪ್ರವೇಶಕ್ಕೆ ಈರಣ್ಣ ಕಡಾಡಿ ಮನವಿ

Latest

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹತೋಟೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ಕೇಂದ್ರ ಮಧ್ಯಪ್ರವೇಶಕ್ಕೆ ಈರಣ್ಣ ಕಡಾಡಿ ಮನವಿ

Public TV
Last updated: March 27, 2025 6:45 pm
Public TV
Share
2 Min Read
iranna kadadi
SHARE

ನವದೆಹಲಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹತೋಟೆಗೆ ತರುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನಿರ್ದೇಶನ ನೀಡಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ಸಂಸತ್ತಿನ ಬಜೆಟ್‌ ಅಧಿವೇಶನದ ಶೂನ್ಯ ವೇಳೆಯಲ್ಲಿ ಆಗ್ರಹಿಸಿದರು.

2023 ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ರಾಜ್ಯದ ಬೆಳಗಾವಿ, ಮೈಸೂರು ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದ ಆದೇಶ ಹೊರಡಿಸಿದೆ. ಆದರೂ, ರಾಜ್ಯ ಸರ್ಕಾರ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಬೆಂಗಳೂರಿನಲ್ಲಿ ಇರುವ ವಿಶೇಷ ನ್ಯಾಯಾಲಯದಲ್ಲಿ ಬಹಳ ಒತ್ತಡವಿದ್ದು, ಕಳೆದ 8-9 ವರ್ಷಗಳ ಹಳೆಯ ಪ್ರಕರಣಗಳು ಬಾಕಿ ಇರುವುದರಿಂದ ಹೊಸ ನ್ಯಾಯಾಲಯಗಳ ಸ್ಥಾಪಿಸಲು ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ. ಆದರೆ, ರಾಜ್ಯ ಸರ್ಕಾರ ಅದನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ ಎಂದರು.

ರಾಜ್ಯ ಸರ್ಕಾರದ ನಿರಾಸಕ್ತಿಯ ಪರಿಣಾಮ ರಾಷ್ಟ್ರ ವಿರೋಧಿ ಶಕ್ತಿಗಳು ಬಹಳಷ್ಟು ಕಡೆ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ, ರಾಮನಗರದ ಬಿಡದಿಯಲ್ಲಿರುವ ಆಟೋಮೊಬೈಲ್ ಉತ್ಪಾದನಾ ಕಂಪನಿಯ ಗೋಡೆಯ ಮೇಲೆ ಬರೆಯಲಾದ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳು ಮತ್ತು ಇತ್ತೀಚೆಗೆ ಹಂಪಿಯಲ್ಲಿ ವಿದೇಶಿ ಪ್ರವಾಸಿಗರ ಹತ್ಯೆ, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆದಿರುವುದು ಇಂತಹ ಘಟನೆಗಳನ್ನು ಹತೋಟೆಗೆ ತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸಂಪೂರ್ಣ ಬಹುಮತದಿಂದ ಗೆದ್ದರೂ ಕೂಡ ಸುಭದ್ರ ಆಡಳಿತ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಚಿನ್ನದ ಕಳ್ಳಸಾಗಣೆಯಲ್ಲಿ ರಾಜ್ಯ ಸರ್ಕಾರದ ಸಚಿವರು ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ. ಕಾಂಗ್ರೆಸ್‌ನ ಹಿರಿಯ ಸಚಿವರೇ ವಿಧಾನಸಭೆಯಲ್ಲಿ 48 ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಮತ್ತು ಸ್ವತಃ ನನ್ನ ಮೇಲೆಯೂ ಕೂಡಾ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಅವಲತ್ತು ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೆಂದರೆ ಸಾಮಾನ್ಯ ಜನರಿಗೆ ರಕ್ಷಣೆ ಕೊಡಲು ಹೇಗೆ ಸಾಧ್ಯ? ಈ ಎಲ್ಲ ಘಟನೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಒಂದು ಸ್ಪಷ್ಟವಾದ ನಿರ್ದೇಶನ ನೀಡಬೇಕು ಮತ್ತು ವಿಶೇಷ ನ್ಯಾಯಾಲಯಗಳ ಸ್ಥಾಪನೆಯಾಗಬೇಕು ಹೂಗೂ ಕಾನೂನು ಸುವ್ಯವಸ್ಥೆಯನ್ನು ಹತೋಟೆಗೆ ತರಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.

TAGGED:bjpcongressEranna KadadiNew Delhiಈರಣ್ಣ ಕಡಾಡಿನವದೆಹಲಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
2 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
3 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
3 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
4 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
4 hours ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?