ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಂದಿಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆ ಅಘೋಷಿತ ಲೋಡ್ ಶೆಡ್ಡಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗ್ತಿದೆ. ರೈತರಿಗೆ ಕೇವಲ 3 ಗಂಟೆ ವಿದ್ಯುತ್ ಕೊಡುತ್ತಿದ್ದಾರೆ. ಅದೂ ರಾತ್ರಿ 12 ರಿಂದ 3 ಗಂಟೆಗೆ ಕರೆಂಟ್ ಸಿಗುತ್ತಿದೆ. ಇದಕ್ಕೆ ಸರ್ಕಾರ ಕಾರಣ. ವಿದ್ಯುತ್ ಕ್ಷೇತ್ರಕ್ಕೆ ಸರ್ಕಾರದಿಂದ ಸಂಪೂರ್ಣ ಬೆಂಬಲ ಸಿಗುತ್ತಿಲ್ಲ. ಹೀಗಾಗಿ ವಿದ್ಯುತ್ ಕೊರತೆ ಇದೆ ಎಂದು ತಿಳಿಸಿದರು.
Advertisement
Advertisement
ನಾವು ಇದ್ದಾಗ ಬೇಸಿಗೆ ಇದ್ದಾಗಲೂ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ನಾವು ಕಾಲ ಕಾಲಕ್ಕೆ ವಿದ್ಯುತ್ ಕ್ಷೇತ್ರಕ್ಕೆ ಸಾಕಷ್ಟು ಸಹಕಾರ ನೀಡಿದ್ದೆವು. ಆದರೆ ಈ ಸರ್ಕಾರ ನಿರ್ವಹಣೆಯಲ್ಲಿ ಎಡವಿದ್ದಾರೆ. ರಾಜ್ಯದ ಆರ್ಥಿಕ ನಿರ್ವಹಣೆ ಸರಿಯಿಲ್ಲ ಎಂದು ಇದು ತೋರಿಸುತ್ತದೆ. ವಿದ್ಯುತ್ ಉತ್ಪಾದಕರಿಗೆ ದುಡ್ಡು ಕೊಡುತ್ತಿಲ್ಲ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ತರಲು ಹಣ ಕೊಡುತ್ತಿಲ್ಲ. ಥರ್ಮಲ್ ಪ್ಲ್ಯಾಂಟ್‌ಗಳಲ್ಲಿ 100% ವಿದ್ಯುತ್ ಪೂರ್ಣ ಉತ್ಪತ್ತಿ ಮಾಡುತ್ತಿಲ್ಲ. ಹೊರಗೆ ಕರೆಂಟ್ ಖರೀದಿಗೆ ಮುಂದಾಗಿದ್ದಾರೆ. ಆದರೆ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜಕೀಯ ಲಾಭಕ್ಕೆ ಮಾಡುವ ಉಚಿತ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ: ಬೊಮ್ಮಾಯಿ
Advertisement
ಈ ಸರ್ಕಾರದಲ್ಲಿ ಹಣಕಾಸಿನ ವ್ಯವಸ್ಥೆ ಸರಿಯಿಲ್ಲದೆ ಹೀಗೆ ಆಗಿದೆ. ರಾಜ್ಯದಲ್ಲಿ ವಿದ್ಯುತ್ ಕ್ಷಾಮ ಆವರಿಸಿದೆ. ಮಳೆಯಿಲ್ಲದೆ ರಾಜ್ಯದಲ್ಲಿ ಈಗ ಕೃಷಿ ಬರ ಇದೆ. ನೀರಿನ ಬರ ಇದೆ. ಇದರ ಜೊತೆಗೆ ಈಗ ವಿದ್ಯುತ್ ಬರ ಕೂಡಾ ರಾಜ್ಯಕ್ಕೆ ಬಂದಿದೆ ಎಂದು ಕಿಡಿಕಾರಿದರು.
Advertisement
ಸಚಿವ ಕೆಜೆ ಜಾರ್ಜ್ ಏನು ಮಾಡಲು ಆಗುತ್ತಿಲ್ಲ. ಯಾಕೆಂದರೆ ಅವರಿಗೆ ಸರಿಯಾಗಿ ಸಪೋರ್ಟ್ ಸಿಗುತ್ತಿಲ್ಲ. ಹಣಕಾಸಿನ ಪರಿಸ್ಥಿತಿ ಸರಿಯಿಲ್ಲದೆ ಇರೋದೆ ಇದರ ಪ್ರತಿಬಿಂಬ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಉದಯ್ ಸ್ಟಾಲಿನ್‌ದು ಹಿಟ್ಲರ್ ಮನಸ್ಥಿತಿ: ಬೊಮ್ಮಾಯಿ ವಾಗ್ದಾಳಿ
Web Stories