ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ (Pakistan)ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ನಾಗಮಂಗಲ (Nagamangala Violence) ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ (Congress) ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಸ್ಲಿಮರಿಗೆ ಫ್ರೀ ಪಾಸ್ ಕೊಟ್ಟಿದ್ದಾರೆ- ಸಿಎಂ ವಿರುದ್ಧ ಸೂಲಿಬೆಲೆ ಗರಂ
ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿಸಿದ ಅವರು ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಕಲ್ಲು, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ: ಪ್ರತಾಪ್ ಸಿಂಹ
ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?
ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಮ್ಮ ಮಕ್ಳನ್ನು ಬಿಟ್ಬಿಡಿ – ನಾಗಮಂಗಲ ಪೊಲೀಸ್ ಠಾಣೆಯ ಮುಂದೆ ಮಹಿಳೆಯರ ಹೈಡ್ರಾಮಾ
ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ:
ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಗಮಂಗಲ ಘಟನೆಗೆ ಒಂದು ಸಮುದಾಯದ ಅತಿಯಾದ ಓಲೈಕೆ ಕಾರಣ- ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಹರಿಹಾಯ್ದರು. ಇದನ್ನೂ ಓದಿ: Nagamangala Violence | ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ: ಪರಮೇಶ್ವರ್ ಲಘು ಹೇಳಿಕೆ