ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.
4-5 ತಿಂಗಳಿಂದ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಬಾರದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಈ ಸರ್ಕಾರದವರು ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಮಾಧ್ಯಮಗಳು ಸುದ್ದಿ ಮಾಡಿದರೆ ಮಾಧ್ಯಮಗಳಿಗೆ ಕೆಲಸ ಇಲ್ಲ ಎನ್ನುತ್ತಾರೆ. ಈ ಸರ್ಕಾರ ಯಾವ ತರಹ ನಡೆಯುತ್ತಿದೆ ಎಂದು ನೋಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಏಪ್ರಿಲ್ ಒಳಗೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಟೆಸ್ಲಾ ಪ್ಲ್ಯಾನ್ – ಆರಂಭಿಕ ಬೆಲೆ ಎಷ್ಟು?
Advertisement
Advertisement
ಇನ್ನೊಂದು ವಾರ ಕಳೆಯಲಿ. ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ನಮಗೂ ರಾಜ್ಯದ ವಿಷಯಗಳ ಬಗ್ಗೆ ನಮ್ಮದೇ ಆದ ಕಮಿಟ್‌ಮೆಂಟ್ ಇಟ್ಟುಕೊಂಡಿದ್ದೇವೆ. ಇವರು ಯಾರಿಂದಲೂ ನಾವು ಹೇಳಿಸಿಕೊಳ್ಳಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕನ್ನಡ ನಾಡು,ನುಡಿ,ಜಲ, ಭಾಷೆಗೆ ಸಿದ್ದರಾಮಯ್ಯ, ಡಿಕೆಶಿ ಕೊಡುಗೆ ಏನು : ಹೆಚ್‌ಡಿಕೆ ಪ್ರಶ್ನೆ
Advertisement