ಕೋಲಾರ: ಬಿಜೆಪಿ (BJP) ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ ಎಂದು ಮಾಲೂರು (Malur) ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ (K. Y. Nanjegowda) ಕಿಡಿಕಾರಿದ್ದಾರೆ.
ಸಿಎಂ ಬದಲಾವಣೆ ಕುರಿತು ಬಿಜೆಪಿ ಹೇಳಿಕೆ ಬಗ್ಗೆ ಕೋಲಾರದ ಮಾಲೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ ಅನ್ನೋದು ಅವರಿಗೆ ಗೊತ್ತಾಗಿದೆ. ಕೇಂದ್ರ ಸರ್ಕಾರ, ರಾಜ್ಯಪಾಲರು ಹಾಗೂ ಇ.ಡಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಇಳಿಸಲು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿಯ ತಿರುಕನ ಕನಸು ನನಸಾಗೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ: ಕಾಗೇರಿ ಕಿಡಿ
Advertisement
Advertisement
ಬಿಜೆಪಿಯವರು ಮೊದಲು ತಮ್ಮ ಉಳುಕು ಸರಿ ಮಾಡಿಕೊಳ್ಳಲಿ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೇ ಅವರ ಪಕ್ಷದವರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿಎಂ ವಿರುದ್ಧ ಯಾರೂ ಇಲ್ಲ. ಸಿಎಂ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. ಆರ್.ಅಶೋಕ್ ಹಾಗೂ ವಿಜಯೇಂದ್ರಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರು ಜೋಡೆತ್ತುಗಳು. ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಭೇಟಿ ಆಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕೆಳಹಂತಕ್ಕೆ ಹೋಗೋದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ರೈಲು ಹಳಿ ಮೇಲೆ ಸಿಲಿಂಡರ್ ಇರಿಸಿ ಹಳಿತಪ್ಪಿಸಲು ಯತ್ನ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಪಾರು
Advertisement
ಕೋಳಿವಾಡ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೊಡಬಾರದು. ಪಾಪ ಅವರಿಗೆ ವಯಸ್ಸಾಗಿದೆ. ಮಾನಸಿಕವಾಗಿ ಏನಾಗಿದೆ ಅಂತ ಗೊತ್ತಾಗುತ್ತಿಲ್ಲ. ಕೋಳಿವಾಡ ಅವರನ್ನು ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ತೆಗೆದುಕೊಳ್ಳಬಾರದು. ಮಾಜಿ ಸ್ಪೀಕರ್ ಆಗಿದ್ರು, ಮಗ ಶಾಸಕರಾಗಿದ್ದಾರೆ ಎಂದರು. ಇದನ್ನೂ ಓದಿ: ತಿಂಗಳಿಗೂ ಮೊದಲೇ ಸ್ಕೆಚ್, ಶೂಟರ್‌ಗಳಿಗೆ ತಲಾ 50,000 ಕಾಂಟ್ರ್ಯಾಕ್ಟ್ – ಸಿದ್ದಿಕಿ ಹಂತಕರ ಪ್ಲ್ಯಾನ್ ರೋಚಕ
Advertisement
ಕೋವಿಡ್ ಹಗರಣ ಎಸ್‌ಐಟಿಗೆ ನೀಡಿರುವ ಕುರಿತು ಮಾತನಾಡಿ, ಕೋವಿಡ್ ವೇಳೆ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ನಿಜವಾದ ತಿಮಿಂಗಿಲಗಳು ಇರೋದು ಇಲ್ಲಿ. ಆಗಿನ ಸಿಎಂ, ಆರೋಗ್ಯ ಮಂತ್ರಿಗಳು ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ. ನಿವೃತ್ತ ನ್ಯಾಯಧೀಶರ ವರದಿ ಆಧರಿಸಿ ಎಸ್‌ಐಟಿಗೆ ನೀಡಲಾಗಿದೆ. ಕೋವಿಡ್ ಹಗರಣದಲ್ಲಿ ಇರೋರು ಜೈಲಿಗೆ ಹೋಗುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಿಂತಿಲ್ಲ- ಪ್ರಿಯಾಂಕ್ ಖರ್ಗೆ