ದಾವಣಗೆರೆ: ಡಿನ್ನರ್ ಪಾಲಿಟಿಕ್ಸ್ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ (Congress) ಸರ್ಕಾರ ಏಪ್ರಿಲ್ನಲ್ಲಿ ಬೀಳಲಿದೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಸರ್ಕಾರ ಬೀಳುವುದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (M.P Renukacharya) ಭವಿಷ್ಯ ನುಡಿದಿದ್ದಾರೆ.
ದಾವಣಗೆರೆಯಲ್ಲಿ (Davanagere) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಹಣ ಹೊಂದಿಸಲು ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.
Advertisement
ರಾಜ್ಯ ಸರ್ಕಾರದಲ್ಲಿ 60% ಕಮಿಷನ್ ದಂಧೆ ನಡೆಯುತ್ತಿದೆ. ಕಮಿಷನ್ ಅರೋಪಕ್ಕೆ ಸಿಎಂ ದಾಖಲೆ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ. ಓತಿಕ್ಯಾತಕ್ಕೆ ಬೇಲಿ ಸಾಕ್ಷಿ ಎನ್ನುವಂತಾಗಿದೆ ಇವರು ಹೇಳುವ ಮಾತು. ರಾಜ್ಯದ ಜನರು ನಿಮ್ಮ ಅಂಗಿ ಹರಿತಾರೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಜಾರಕಿಹೊಳಿ ನಮ್ಮ ಊಟ ನಮ್ಮ ಮೀಟಿಂಗ್ ಎಂದು ಹೇಳಿದ್ದಾರೆ. ಇತ್ತ ಪರಮೇಶ್ವರ್, ರಾಜಣ್ಣ, ಸತೀಶ್ ಜಾರಕಿಹೊಳಿ ತಮ್ಮ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಅಲ್ಲದೇ ಇದು ದಲಿತ ವಿರೋಧಿ ಸರ್ಕಾರ ಎಂದಿದ್ದಾರೆ. ಸಿಎಂ ಸೋಮವಾರ ಶಾಸಕಾಂಗ ಸಭೆ ಕರೆದಿದ್ದಾರೆ. ಆ ಸಭೆಯ ನಂತರ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಈ ಸರ್ಕಾರವನ್ನು ಎಸ್ಸಿ, ಎಸ್ಟಿ ಸಮಾಜದ ಶಾಸಕರು ಬೆತ್ತಲು ಮಾಡುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
Advertisement
ಬಿಜೆಪಿಯಲ್ಲಿ (BJP) ಯಾವುದೇ ಟೀಂ ಇಲ್ಲ. ರಾಜ್ಯಾಧ್ಯಕ್ಷರಿಗೆ ಮಾಜಿ ಸಚಿವರು, ಮಾಜಿ ಶಾಸಕರು ಎಲ್ಲಾ ಹಂತದಲ್ಲೂ ಸಹಕಾರ ನೀಡಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಂಘಟನೆಗಾಗಿ ಸಭೆ ಕರೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.