ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ (Congress) ಸರ್ಕಾರ ಇಲ್ಲಿನ ಜನರಿಗೆ ಕಳೆದ 3 ವರ್ಷಗಳಲ್ಲಿ ವಂಚಿಸುವ ಕೆಲಸ ಮಾಡಿದೆ. ಇಲ್ಲಿನ ಜನರಿಗೆ ವಿಶ್ವಾಸದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರು ಟೀಕಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಒಳಜಗಳದಿಂದ ಜನಹಿತದ ಕೆಲಸಗಳನ್ನು ಕಡೆಗಣಿಸಿದ್ದಾರೆ. ಜನಹಿತಕ್ಕೂ ಈ ಸರ್ಕಾರಕ್ಕೆ ಯಾವುದೇ ಸಂಬಂಧ ಇಲ್ಲದಂತಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ
ಸರ್ಕಾರ ನಡೆಸುತ್ತಿರುವ ನಾಯಕರು ಸರ್ಕಾರವನ್ನು ತಮಗಾಗಿ ಬಳಸಿಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇಲ್ಲಿನ ಸರ್ಕಾರ ದೆಹಲಿ ಕಾಂಗ್ರೆಸ್‌ನ ಎಟಿಎಂ ಆಗಿದೆ ಎಂದು ದೂರಿದರು.
ನಮ್ಮ ಪಕ್ಷದ ಜಿಲ್ಲಾ ತರಬೇತಿ ಶಿಬಿರಗಳು ನಡೆಯುತ್ತಿವೆ. ಅದರಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಕರ್ನಾಟಕದಲ್ಲಿ ಪಕ್ಷದ ಚಟುವಟಿಕೆ, ಸಕ್ರಿಯ ಸಂಘಟನೆ ಎಂಬುದನ್ನು ತಿಳಿದುಕೊಂಡಿದ್ದಾಗಿ ಹೇಳಿದರು. ಇದನ್ನೂ ಓದಿ: Falta Election Result| 30 ಸಾವಿರ ಮತಗಳ ಮುನ್ನಡೆಯಲ್ಲಿ ಬಿಜೆಪಿ, 4ನೇ ಸ್ಥಾನಕ್ಕೆ ಜಾರಿದ ಟಿಎಂಸಿ
