Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

Bengaluru City

ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

Public TV
Last updated: September 4, 2024 7:31 pm
Public TV
Share
2 Min Read
R Ashok bengaluru
SHARE

-ಸಿಎಂ ಕುರ್ಚಿಗೆ ಟವೆಲ್ ಹಾಕಿದ ನಾಯಕರು

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ನೀಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿದ್ದಾರೆ ಎಂದರು. ಇದನ್ನೂ ಓದಿ: 231 ಸಾಕ್ಷಿ ಕೇಳಿ ಜೈಲಿನಲ್ಲಿ ದರ್ಶನ್‌ ಶಾಕ್‌!

ಬೆಂಗಳೂರಿನಲ್ಲಿ ಕಮಿಷನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ‍್ಯಾಂಡ್ ಬೆಂಗಳೂರಾಗಿದೆ ಎಂದು ದೂರಿದರು. ಇದನ್ನೂ ಓದಿ: ಹಾವೇರಿ ನಗರಸಭೆ `ಬಿಜೆಪಿ’ ತೆಕ್ಕೆಗೆ – ಬಹುಮತವಿದ್ದರೂ ಕಾಂಗ್ರೆಸ್‌ಗೆ ಭಾರೀ ಮುಖಭಂಗ

ಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಅಶೋಕ್ ಆಗ್ರಹಿಸಿದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ: ಕೆಇಎ

ಕಾಂಗ್ರೆಸ್ ಬಂದ ಬಳಿಕ ಅತ್ಯಾಚಾರ, ಮಹಿಳಾ ದೌರ್ಜನ್ಯ ಹೆಚ್ಚಿದೆ. ಕಾರ್ಕಳದಲ್ಲಿ (Karkala) ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗೊಂಡಿವೆ. ಇದರ ಹಿಂದೆ ದೊಡ್ಡ ಡ್ರಗ್ಸ್ ಜಾಲವೇ ಇದೆ. ಬಿಜೆಪಿ ಸರ್ಕಾರ ಇದ್ದಾಗ ವಿಶೇಷ ಅಭಿಯಾನ ನಡೆಸಿ ಡ್ರಗ್ಸ್ ನಿಯಂತ್ರಣ ಮಾಡಲಾಗಿತ್ತು. ಈ ಸರ್ಕಾರ ಡ್ರಗ್ಸ್ ದಂಧೆಕೋರರಿಗೆ ಅನುಮತಿ ನೀಡಿದೆ. ಇದರಿಂದಾಗಿ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದರು.

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಅಂಗನವಾಡಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಿಲ್ಲ. ಆದರೆ ರೀಲ್ಸ್ ಮಾಡಲು 60-70 ಕೋಟಿ ರೂ. ನೀಡುತ್ತಿದ್ದಾರೆ. ಅದೇ ಹಣದಲ್ಲಿ ಶಾಲೆಗಳ ದುರಸ್ತಿ ಮಾಡಬಹುದಿತ್ತು ಕಿಡಿಕಾರಿದರು. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

TAGGED:bengalurucongressLakshmi Hebbalkarr ashokಆರ್ ಅಶೋಕ್ಕಾಂಗ್ರೆಸ್ಬೆಂಗಳೂರುಲಕ್ಷ್ಮಿ ಹೆಬ್ಬಾಳಕರ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
38 seconds ago
Sharana Prakash Patil
Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ್ ಪ್ರಕಾಶ್ ಪಾಟೀಲ್

Public TV
By Public TV
3 minutes ago
Mojtaba Khamenei
Latest

ಇರಾನ್‌ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೆ ರಷ್ಯಾದಲ್ಲಿ ಚಿಕಿತ್ಸೆ!

Public TV
By Public TV
5 minutes ago
old age home kalaburagi
Kalaburagi

ಕಲಬುರಗಿ| ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್ – ಆಹಾರಕ್ಕೆ ವೃದ್ಧರ ಪರದಾಟ

Public TV
By Public TV
25 minutes ago
Rice Mill 1
Districts

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ

Public TV
By Public TV
26 minutes ago
Davanagere DC
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?