ನವದೆಹಲಿ: ರೈತರ ‘ದೆಹಲಿ ಚಲೋ’ ಆಂದೋಲನದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಲೋಕಸಭಾ ಚುನಾವಣೆಯನ್ನು ಗುರುಯಾಗಿಸಿಕೊಂಡು ತಮ್ಮ ಮೊದಲ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ.
ಛತ್ತೀಸ್‌ಗಢದ ಅಂಬಿಕಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ `ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಮಾತನಾಡಿದ ಖರ್ಗೆ, ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ (Congress) ಪಕ್ಷವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆಗಳಲ್ಲಿ ಒಂದಾದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP-Minimum Support Price) ಖಾತರಿಪಡಿಸುವ ಕಾನೂನು ಜಾರಿಗೆ ತರುವುದಾಗಿ ಘೋಷಣೆ ಮಾಡಿದರು. ಅಲ್ಲದೆ ಇದು ನಮ್ಮ ಮೊದಲ ಭರವಸೆ ಎಂದು ಹೇಳಿದರು.
Advertisement
Advertisement
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜನರು ಮೋದಿಯವರ “ಗ್ಯಾರಂಟಿ”ಗಳನ್ನು ನಂಬಬಾರದು ಎಂದು ಕರೆ ನೀಡಿದರು. ಇದನ್ನೂ ಓದಿ: ರೈತರ ಪ್ರತಿಭಟನೆ- 1ಕಿ.ಮೀ ಸಾಗಲು ಬರೋಬ್ಬರಿ ಒಂದು ಗಂಟೆ ಕಾದ ವಾಹನಗಳು
Advertisement
ಪ್ರಧಾನಿ ಮೋದಿಗೆ (Narendra Modi) ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಮತ್ತು ಅವರು ತಮಗಾಗಿ ಮಾತ್ರ ಕೆಲಸ ಮಾಡುತ್ತಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಬಡವರ ಪಕ್ಷವಾದರೆ, ಬಿಜೆಪಿ ಶ್ರೀಮಂತರ ಪಕ್ಷ ಎಂದು ಕಿಡಿಕಾರಿದರು.