ಹಾಸನ: ಕಾಂಗ್ರೆಸ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ (200 Unit Electricity Free) ಭರವಸೆ ನೀಡಿರುವ ಹಿನ್ನೆಲೆ ಹಾಸನ ಜಿಲ್ಲೆಯಲ್ಲೂ ವಿದ್ಯುತ್ ಬಿಲ್ (Electricity Bill) ಪಾವತಿಸಲು ಜನರು ನಿರಾಕರಿಸುತ್ತಿದ್ದಾರೆ.
ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ
ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲ್ಲೂಕಿನ, ಹಳೇ ಕೋರ್ಟ್ ರಸ್ತೆಯಲ್ಲಿರುವ ಕೋಳಿ ಅಂಗಡಿ ಮಾಲೀಕ ಸುರೇಶ್ ಎಂಬವರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬುಧವಾರ ಚೆಸ್ಕಾಂ ಸಿಬ್ಬಂದಿ (Chescom Employee) ಸಂತೋಷ್ ಹಾಗೂ ಇತರರು ಸುರೇಶ್ ಮನೆ ಬಳಿ ತೆರಳಿ ಬಾಕಿ 1,150 ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಾರೆ. ಆದ್ರೆ ಸುರೇಶ್ ನಾವು ಹಣ ಕಟ್ಟಲ್ಲ, ಸರ್ಕಾರ ಹೇಳಿದೆ ಆದರೂ ನೀನು ಬಿಲ್ ಕೇಳಲು ಬಂದಿದ್ದೀಯಾ ಅಂತಾ ಚೆಸ್ಕಾಂ ಸಿಬ್ಬಂದಿಯನ್ನ ಹಾಗೂ ಆತನ ಪತ್ನಿ ನಿಂದಿಸಿ ಜಗಳ ತೆಗಿದಿದ್ದಾನೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಯಾರಿಗೆ ಅಂತ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ: ಹೆಬ್ಬಾಳ್ಕರ್ ಹೇಳಿಕೆ ಒಪ್ಪದ ಡಿಕೆಶಿ
ಇದು ಅತಿರೇಕಕ್ಕೆ ತಿರುಗಿ ಬಿಲ್ ಕಲೆಕ್ಟರ್ ಸಂತೋಷ್ ಮೇಲೆ ಸುರೇಶ್ ಹಾಗೂ ಆತನ ಅಪ್ರಾಪ್ತ ಪುತ್ರ ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದಾರೆ. ಸಂತೋಷ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.