Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್‌ನವರದ್ದು ಅಂಬೇಡ್ಕರ್‌ರನ್ನ ಅವಮಾನಿಸಿದ ಸಂಸ್ಕೃತಿ, ರಾಜ್ಯಪಾಲರ ಅಪಮಾನ ಸಹಿಸಲ್ಲ: ಗೋವಿಂದ ಕಾರಜೋಳ

Public TV
Last updated: August 20, 2024 9:35 pm
Public TV
Share
4 Min Read
Govind Karjol Mahadev Belgaum Congress BJP Govinda Karjol
SHARE

ಬೆಂಗಳೂರು: ಸಿದ್ದರಾಮಯ್ಯನವರು (Siddaramaiah) ತನಿಖೆ ಎದುರಿಸಿ ಆರೋಪಮುಕ್ತರಾಗಿ ಹೊರಬರಬೇಕು ಎಂದು ಸಂಸದ ಗೋವಿಂದ ಕಾರಜೋಳ (Govind Karjol) ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಮೇಲೆ ಆರೋಪ ಬಂದಾಗ ಅವರನ್ನು ಅಪರಾಧಿ ಎನ್ನುವುದಿಲ್ಲ. ನಿರಪರಾಧಿ ಎಂದು ಸಾಬೀತುಪಡಿಸುವ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದೆ. ಅದಕ್ಕಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಿತ್ತು. ಅದನ್ನು ಬಿಟ್ಟು ಸಾಂವಿಧಾನಿಕ ಹುದ್ದೆಯಲ್ಲಿರುವ, ರಾಷ್ಟ್ರಪತಿಗಳ ಪ್ರತಿನಿಧಿ ಎನಿಸಿದ ರಾಜ್ಯಪಾಲರನ್ನು ಅವಮಾನಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಂಸ್ಕೃತಿ ಎಂಬುದು ಇದೆಯೇ ಎಂದು ಕೇಳಿದರು. ಇದನ್ನೂ ಓದಿ: ಚಾರ್ಜ್‌ಶೀಟ್‌ನಲ್ಲಿ ಹೆಸರಿರುವ ಕುಮಾರಸ್ವಾಮಿ ಕೇಂದ್ರ ಸಚಿವರಾಗಬಹುದಾ: ಪೊನ್ನಣ್ಣ ಪ್ರಶ್ನೆ

siddaramaiah 12

ಸಾಮಾಜಿಕ ನ್ಯಾಯದ ಗಂಧವೇ ತಿಳಿಯದವರು ಕಾಂಗ್ರೆಸ್ಸಿಗರು. ಚಪ್ಪಲಿಯಿಂದ ರಾಜ್ಯಪಾಲರ ಫೋಟೊಗೆ ಹೊಡೆದುದಲ್ಲದೆ ಅವರ ಭಾವಚಿತ್ರ ಸುಟ್ಟಿದ್ದೀರಿ. ದಲಿತ ವ್ಯಕ್ತಿ ರಾಜ್ಯಪಾಲರ ಹುದ್ದೆಯಲ್ಲಿ ಇರುವುದು ನಿಮ್ಮ ಗಮನದಲ್ಲಿಲ್ಲವೇ? ಡಾ. ಅಂಬೇಡ್ಕರರಿಗೆ ಅವಮಾನ ಮಾಡಿದ ಕಾಂಗ್ರೆಸ್ಸಿಗರಿಗೆ ಸಂಸ್ಕೃತಿ ಇರಲು ಸಾಧ್ಯವೇ? ಹಿಂದೆ ತುಮಕೂರಿನ ಎಂ.ವಿ.ರಾಮರಾವ್ ಎಂಬವರು ಗೃಹ ಸಚಿವರಾಗಿದ್ದರು. ಅವರ ಜಿಲ್ಲೆಯಲ್ಲಿ ರೈತರ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಆದುದು ವಿಧಾನಸಭೆಯಲ್ಲಿ ಚರ್ಚೆಗೆ ಬಂದಿತ್ತು. ಶಾಂತವೇರಿ ಗೋಪಾಲಗೌಡರು ವಿಧಾನಸಭಾ ಸ್ಪೀಕರ್ ಆಗಿದ್ದರು. ಗೃಹ ಸಚಿವರೇ ನಿಮ್ಮ ಮಗನ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಆಗಿದ್ದರೆ ಏನು ಮಾಡುತ್ತಿದ್ದಿರಿ ಎಂದು ಸ್ಪೀಕರ್ ಕೇಳಿದ್ದು, ಎಂ.ವಿ.ರಾಮರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆದರ್ಶ ವ್ಯಕ್ತಿ ಆಗಿದ್ದರು ಎಂದು ತಿಳಿಸಿದರು.

ರಾಮಕೃಷ್ಣ ಹೆಗಡೆಯವರ ಮೇಲೆ ಟೆಲಿಫೋನ್ ಕದ್ದಾಲಿಕೆ ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದರು. ಕಾಂಗ್ರೆಸ್ಸಿನವರೇ ಆದ ಲಾಲ್ ಬಹದ್ದೂರ್ ಶಾಸ್ತ್ರಿಯವರು ರೈಲ್ವೆ ಸಚಿವರಾಗಿದ್ದಾಗ ರೈಲು ಅವಘಡ ನಡೆದಿದ್ದು, ನಿಷ್ಪಕ್ಷಪಾತ ತನಿಖೆಗಾಗಿ ರಾಜೀನಾಮೆ ನೀಡಿದ್ದರು ಎಂದು ಕಾರಜೋಳ ವಿವರಿಸಿದರು.

ಎಂಎಲ್‌ಸಿ ಸ್ಥಾನದಿಂದ ವಜಾ ಮಾಡಿ:
ಎಂಎಲ್‌ಸಿ ಐವಾನ್ ಡಿಸೋಜ ಅವರು ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ. ರಾಜಭವನಕ್ಕೆ ನುಗ್ಗಿ ತೊಂದರೆ ಮಾಡುತ್ತೇವೆ ಎಂದಿದ್ದಾರೆ. ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ನನಗೆ ಬರುತ್ತಿದೆ. ಅವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟಬೇಕು. ಎಂಎಲ್‌ಸಿ ಸ್ಥಾನದಿಂದ ವಜಾ ಮಾಡಲು ಗೋವಿಂದ ಕಾರಜೋಳ ಒತ್ತಾಯಿಸಿದರು. ಇದನ್ನೂ ಓದಿ: ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿಕೆಶಿ

Ivan Dsouza

ಈಚೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 2 ಪ್ರಮುಖ ಹಗರಣಗಳಲ್ಲಿ ಸಿಲುಕಿದ್ದಾರೆ. ಮುಡಾದಲ್ಲಿ ಅನಧಿಕೃತ- ಕಾನೂನುಬಾಹಿರವಾಗಿ ಅವರ ಪತ್ನಿ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿರುವುದು, ರಾಜ್ಯದ ಪರಿಶಿಷ್ಟ ಜಾತಿ- ಜನಾಂಗಗಳಿಗೆ ಸೇರಿದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗಲು ದರೋಡೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಆರ್‌ಟಿಐ ಕಾರ್ಯಕರ್ತರ ಅಬ್ರಹಾಂ ಅವರು, ಈ ಕುರಿತ ಲೂಟಿಯ ವಿವರ ಪಡೆದು ಕೇಸು ದಾಖಲಿಸಿದ್ದಾರೆ. ಯುಪಿಎ ಆಡಳಿತ ಇದ್ದಾಗ ಮಾಹಿತಿ ಹಕ್ಕು ಕಾಯ್ದೆ ಜಾರಿಗೊಳಿಸಿದ್ದಾಗಿ ಕಾಂಗ್ರೆಸ್ಸಿನವರು ಡಂಗೂರ ಸಾರುತ್ತ ಓಡಾಡಿದರು. ಅವರೇ ತಂದ ಕಾಯ್ದೆಯನ್ನು ಈಗ ಅವರೇ ಗೌರವಿಸುವುದಿಲ್ಲ ಎಂದು ಆಕ್ಷೇಪಿಸಿದರು.

ಹಗರಣಗಳಲ್ಲಿ ಸಿಲುಕಿದ ಬಳಿಕ ಆ ಕಾನೂನಿಗೆ ಗೌರವಿಸುವ ಕನಿಷ್ಠ ಸೌಜನ್ಯ ಕೂಡ ಕಾಂಗ್ರೆಸ್ ನಾಯಕರಿಗೆ ಇಲ್ಲ. ಸಂವಿಧಾನದತ್ತವಾಗಿ ಪ್ರಮಾಣವಚನ ಸ್ವೀಕರಿಸಿ ಮುಖ್ಯಮಮಂತ್ರಿಯಾದ ಕಾಂಗ್ರೆಸ್ಸಿನ ಸಿದ್ದರಾಮಯ್ಯನವರು ಅವರ ಮೇಲೆ ಆಪಾದನೆ ಬಂದಾಗ ಉತ್ತರ ಕೊಡಬೇಕಿತ್ತು. ಸಾಚಾ ಎಂದು ಸಾಬೀತು ಮಾಡಬೇಕಿತ್ತು. ಆದರೆ, ನಾನೊಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ. ನನ್ನ ಮುಖಕ್ಕೆ ಮಸಿ ಬಳಿಯಲು, ವ್ಯಕ್ತಿತ್ವಕ್ಕೆ ಧಕ್ಕೆ ತರಲು ಬಿಜೆಪಿ- ಜೆಡಿಎಸ್‌ನವರು ಹುನ್ನಾರ ನಡೆಸಿದ್ದಾಗಿ ಆರೋಪಿಸಿದ್ದಾರೆ ಎಂದು ಕಾರಜೋಳ ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷಗಳ ಕಾಲ, ದೇಶದ ಪ್ರಧಾನಿಯಾಗಿ 10ಕ್ಕೂ ಹೆಚ್ಚು ವರ್ಷ ಸೇರಿ ಸುಮಾರು 24 ವರ್ಷಗಳ ಕಾಲ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಅವರು ಯಾವತ್ತೂ ಕೂಡ ಜಾತಿ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬರಲಿಲ್ಲ. ಜಾತಿಯ ರಕ್ಷಣೆ ಪಡೆಯಲಿಲ್ಲ. ಅವರ ಪ್ರತಿಭೆ, ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಈ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪ್ರಪಂಚಕ್ಕೇ ಆದರ್ಶ ಪ್ರಧಾನಿಯಾಗಿ ಹೊರಹೊಮ್ಮಿದ್ದಾರೆ. ಪ್ರಧಾನಿ ಅವರ ಬಗ್ಗೆ ಕಾಂಗ್ರೆಸ್ಸಿನವರು ಏಕವಚನದಲ್ಲಿ ಮಾತನಾಡುತ್ತಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ

Chalavadi Narayanaswamy

ಹಿಂದುಳಿದವರು ಸಿಎಂ ರಕ್ಷಣಾ ಕವಚವೇ?: ಛಲವಾದಿ ನಾರಾಯಣಸ್ವಾಮಿ
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ನಿರಪರಾಧಿ ಎಂದು ಸಾಬೀತುಪಡಿಸುವ ಬದಲಾಗಿ ಹಿಂದುಳಿದವರು ಎಂಬ ರಕ್ಷಣಾ ಕವಚದಡಿ ಆಶ್ರಯ ಪಡೆಯಲೆತ್ನಿಸುತ್ತಿದ್ದಾರೆ ಎಂದು ಟೀಕಿಸಿದರು. ಸದನದಲ್ಲಿ ನಮ್ಮ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಇನ್ನೂ ಒಂದು ದಿನ ಸದನ ಇದ್ದರೂ ನೀವ್ಯಾಕೆ ಓಡಿ ಹೋದಿರಿ ಎಂದು ಕೇಳಿದರು.

ನಾವು ಜನರಿಗೆ ಮನವರಿಕೆ ಮಾಡಲು ಪಾದಯಾತ್ರೆ ಮಾಡಿದೆವು. ಆದರೆ, ನೀವ್ಯಾಕೆ ನಮ್ಮಿಂದ ಮುಂಚೆ ಹೋಗಿ ನಾನು ಕಳ್ಳನಲ್ಲ; ನನ್ನಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಹೇಳಿದ್ದೀರಿ ಎಂದು ಕೇಳಿದರು. ನೀವು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೀರಲ್ಲವೇ? ಎಂದರಲ್ಲದೆ, ನಮ್ಮ ತಪ್ಪಿಲ್ಲದ ಕಾರಣ ಹಿಂದೆ ಹಿಂದೆ ಬಂದು ನಾವು ಉತ್ತರ ಕೊಟ್ಟೆವಾ ಎಂದು ಚಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ಕೋವಿಡ್ ಮಹಾಮಾರಿ ಇದ್ದರೂ ಕಾಂಗ್ರೆಸ್ಸಿಗರು ಮೇಕೆದಾಟು ಪಾದಯಾತ್ರೆ ಮಾಡಿ ನಾಟಕ ಪ್ರದರ್ಶನ ಮಾಡಿದ್ದಾಗಿ ಆಕ್ಷೇಪಿಸಿದರು. ಆದರೂ ನಾವು ಅಡ್ಡಿ ಮಾಡಲಿಲ್ಲ ಎಂದರಲ್ಲದೆ, ಹಿಂದುಳಿದ ಸಮಾಜಕ್ಕೆ ಸೇರಿದ ಪ್ರಾಮಾಣಿಕ ಪ್ರಧಾನಿಯವರ ರಾಜೀನಾಮೆ ಕೇಳುತ್ತೀರಲ್ಲವೇ? ಅವರನ್ನು ಫೂಲ್ ಎನ್ನುತ್ತೀರಲ್ಲವೇ? ನಿಮಗೆ ಆ ಪ್ರಜ್ಞೆ ಇಲ್ಲವೇ ಎಂದು ಕೇಳಿದರು. ಗೌರವಾನ್ವಿತ ರಾಷ್ಟ್ರಪತಿಗಳನ್ನು ಅವಳು ಎಂದು ಮಾತನಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು.

ಒಂದು ವರ್ಷದ ಬಳಿಕ ಎಫ್‌ಐಆರ್:
ನಿಮ್ಮ ಹಗರಣಗಳ ತನಿಖೆ ಆಗುವುದು ಬೇಡವೇ ಎಂದು ಕೇಳಿದರು. ರಾಜೀನಾಮೆ ಕೊಟ್ಟು ನ್ಯಾಯಾಲಯವನ್ನು ಎದುರಿಸಿ ಎಂದು ಆಗ್ರಹಿಸಿದರು. ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಬೇರೆಡೆ ವರ್ಗಾಯಿಸಿದ್ದರ ವಿರುದ್ಧ ಕಳೆದ ವರ್ಷ ಪ್ರತಿಭಟನೆ ಮಾಡಿದ್ದೆವು. ಒಂದು ವರ್ಷದ ಬಳಿಕ ನಮ್ಮ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ವಿವರ ನೀಡಿದರು.

TAGGED:bjpcongressGovind karjolsiddaramaiahಕಾಂಗ್ರೆಸ್ಗೋವಿಂದ ಕಾರಜೋಳಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema Updates

Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
1 hour ago
disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
5 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
5 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
6 hours ago

You Might Also Like

Russian Foreign Minister Sergey Lavrov
Latest

ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

Public TV
By Public TV
1 minute ago
H D Kumaraswamy 1
Bengaluru City

ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
22 minutes ago
Abhimanyu Easwaran
Cricket

ಇಂಗ್ಲೆಂಡ್‌ ಪ್ರವಾಸಕ್ಕೆ ಟೀಂ ಇಂಡಿಯಾ ಎ ತಂಡ ಪ್ರಕಟ

Public TV
By Public TV
42 minutes ago
Chhattisgarh Current
Latest

ಛತ್ತೀಸ್‌ಗಢದ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

Public TV
By Public TV
1 hour ago
celebi cargo turkey
Court

Boycott Turkey| ಕೇಂದ್ರದ ವಿರುದ್ಧ ಕೋರ್ಟ್‌ ಮೊರೆ ಹೋದ ಸೆಲಿಬಿ

Public TV
By Public TV
2 hours ago
BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?