ಬೆಂಗಳೂರು: ದೇಶದಲ್ಲಿ ಟೆರರಿಸ್ಟ್‌ಗಳನ್ನ (Terrorist) ಹುಟ್ಟುಹಾಕಿದ್ದೇ ಕಾಂಗ್ರೆಸ್ (Congress), ಟೆರಸ್ಸ್‌ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
Advertisement
ಕರ್ನಾಟಕದ (Karnataka) ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ (NIA) ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ (ED) ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ (Police) ನೆರವಿನೊಂದಿಗೆ ಪಿಎಫ್‌ಐ (PFI) ಹಾಗೂ ಎಸ್‌ಡಿಪಿಐ (SDPI) ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: 50 ಪಿಯುಸಿ ಕಾಲೇಜುಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್- ಸಿಎಂ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ
Advertisement
Advertisement
ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra), ಖಚಿತ ಮಾಹಿತಿ ಮೇರೆಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಮೇಲೆ ಎನ್‌ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ರೇಡ್ ಆಗಿದೆ. ಸಂಘಟನೆಯ ಕೆಲ ಮುಖಂಡರನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
Advertisement
ನಾನು ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸ್ತೇನೆ. ಶಿವಮೊಗ್ಗ ಪ್ರಕರಣದಲ್ಲಿ ಬಾಂಬ್ (Bomb) ತಯಾರು ಮಾಡಲಾಗಿತ್ತು. ಅದನ್ನು ಟ್ರಯಲ್ ಕೂಡ ಮಾಡಿದ್ದಾರೆ. ಅವರ ಬಂಧನದಿಂದ ರಕ್ತಹಾನಿ ಜೀವಹಾನಿ ತಡೆಗಟ್ಟಲಾಗಿದೆ. ಇದನ್ನೂ ಓದಿ: ಮೊಸಳೆಯನ್ನು ಹಿಡಿದು ಕ್ಲಾಸ್ ರೂಮಿನಲ್ಲಿ ಕೂಡಿ ಹಾಕಿದ ಗ್ರಾಮಸ್ಥರು
ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ದೇಶದಲ್ಲಿ ಎಲ್ಲರೂ ಕಾನೂನು ಪಾಲಿಸಬೇಕು. ತಪ್ಪಿತಸ್ಥರು ಅಲ್ಪಸಂಖ್ಯಾತರೋ ಇಲ್ವೋ ಅಂತ ಪೊಲೀಸರು ಕೆಲಸ ಮಾಡೋಕೆ ಆಗಲ್ಲ. ಟೆರರಿಸ್ಟ್ಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್, ಟೆರರಿಸ್ಟ್ಗಳನ್ನು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.
ಸಂಘಟನೆ ಬ್ಯಾನ್ ಆದ್ರೆ ವ್ಯಕ್ತಿಗಳ ರಾಕ್ಷಸ ಮನೋಭಾವ ಬದಲಾಗೋದಿಲ್ಲ. ಶಿವಮೊಗ್ಗದ ಶಾರಿಕ್ ಸ್ಯಾಟಲೈಟ್ ಫೋನ್ (Satellite Phone) ನಲ್ಲಿ ಮಾತನಾಡಿದ್ದಾನೆ. ತಲೆಮರೆಸಿಕೊಂಡಿರೋ ಆತನನ್ನು ಪತ್ತೆಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸರಿಗೆ ಹೇಗೆ ಹ್ಯಾಟ್ಸ್ ಆಫ್ ಸಲ್ಲಿಸಬೇಕೋ ಗೊತ್ತಾಗ್ತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.