ನವದೆಹಲಿ: ಮುಂಬರುವ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳಿಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ (Bharat Jodo Yatra) ಬೆನ್ನಲ್ಲೇ ಹೊಸ ಅಭಿಯಾನ ಆರಂಭಿಸಿದೆ.
Advertisement
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ (AICC) ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (K C Venugopal) ‘ಹಾತ್ ಸೇ ಹಾತ್ ಜೋಡೋ’ (ಕೈಯಿಂದ ಕೈ ಜೋಡಿಸಿ) (Hath Se Hath Jodo Yatra) ಅಭಿಯಾನದ ಲೋಗೋ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಯಾತ್ರೆಯ ಉದ್ದೇಶವನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆ ಜನರ ಮನೆಗಳನ್ನು ತಲುಪಲು ‘ಹಾತ್ ಸೇ ಹಾತ್ ಜೋಡೋ’ ಅಭಿಯಾನ ಆರಂಭಿಸಿದ್ದು ಜನವರಿ 26 ರಿಂದ ಇದು ಆರಂಭವಾಗಲಿದೆ ಎಂದರು. ಇದನ್ನೂ ಓದಿ: ಚುನಾವಣೆ ಸಂದರ್ಭದಲ್ಲಿ ED ನನ್ನನ್ನು ಬಂಧಿಸಲುಬಹುದು – ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಕೆಜಿಎಫ್ ಬಾಬು
Advertisement
Advertisement
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ‘ಹಾತ್ ಸೇ ಹಾತ್ ಜೋಡೋ’ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಮೊದಲ ಹಂತದಲ್ಲಿ ಗ್ರಾಮ ಮತ್ತು ಬ್ಲಾಕ್ ಮಟ್ಟದಲ್ಲಿ, ಎರಡನೇ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಮತ್ತು ಮೂರನೇ ಹಂತದಲ್ಲಿ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದೇ ವೇಳೆ ಬಿಜೆಪಿ (BJP) ಆಡಳಿತ ವೈಫಲ್ಯಗಳ ಬಗ್ಗೆ ಜಾರ್ಜ್‍ಶೀಟ್ ಸಿದ್ಧಪಡಿಸಿದ್ದು ಅವುಗಳನ್ನು ಜನರಿಗೆ ತಲುಪಿಸುತ್ತೇವೆ ಮತ್ತು ಕಾಂಗ್ರೆಸ್ ಉದ್ದೇಶಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಇದಕ್ಕೆ ಭಾರತ್ ಜೋಡೋದಂತೆ ಅಭೂತಪೂರ್ವ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k