ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ- ಸತೀಶ್ ಜಾರಕಿಹೊಳಿಗೆ ತುರ್ತು ಬುಲಾವ್ ನೀಡಿದ್ಯಾಕೆ?

Public TV
1 Min Read
congress high command satish jarkiholi

– ದೆಹಲಿಯಲ್ಲಿ ಸಿಎಂ, ಡಿಸಿಎಂ; ಡಿಕೆಶಿಗೆ ಕಾದಿದ್ಯಾ ಶಾಕ್?

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಿಂದಾಗಿ ರಾಜ್ಯ ಕಾಂಗ್ರೆಸ್ (Congress) ಸರ್ಕಾರ ತೀವ್ರ ಟೀಕೆಗೆ ಒಳಗಾಗಿದೆ. ಈ ಹೊತ್ತಿನಲ್ಲೇ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ.

ಹೈಕಮಾಂಡ್ ಬುಲಾವ್ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ದೆಹಲಿಗೆ ಭೇಟಿ ನೀಡಿದ್ದಾರೆ. ತುರ್ತು ಬುಲಾವ್ ಕಾರಣಕ್ಕೆ ಸತೀಶ್ ಜಾರಕಿಹೊಳಿ (Satish Jarkiholi) ಕೂಡ ದೆಹಲಿಯಲ್ಲಿದ್ದಾರೆ. ಇದು ಹಲವಾರು ಕುತೂಹಲ ಮೂಡಿಸಿದೆ. ಹೈಕಮಾಂಡ್ ದೊಡ್ಡ ನಿರ್ಧಾರ ಕೈಗೊಳ್ಳಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

DK Shivakumar

ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟಕ್ಕೂ ಮೇಜರ್ ಸರ್ಜರಿ ಬೀಳಲಿದೆ ಎನ್ನಲಾಗುತ್ತಿದೆ. ಸಂಪುಟದ 6ರಿಂದ 10 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಮಾತು ಕೇಳಿಬಂದಿದೆ.

ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿಎಂ ಮತ್ತು ಡಿಸಿಎಂ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದರು. ನಂತರ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಹೈಕಮಾಂಡ್ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಪ್ಲ್ಯಾನ್ ಮಾಡಿದೆಯೇ ಎಂಬ ಪ್ರಶ್ನೆ ಮೂಡಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಇದನ್ನೂ ಓದಿ: ಸಿದ್ದರಾಮಯ್ಯ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕಿಡಿ

Share This Article