ಬೆಂಗಳೂರು: ಉಪುಚುನಾವಣೆಯಲ್ಲಿ (ByElection) ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ಫೈಟ್ ಇತ್ತು. ಅದರೆ ಈಗಿನ ಟ್ರೆಂಡ್ ಸಮಾಧಾನಕಾರ ಇಲ್ಲ. ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ (Congress) ಮುಂದೆ ಇದೆ. ಶಿಗ್ಗಾಂವಿಯಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಆದರೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ಸ್ಟೈಲೀಶ್ ಆದ ಸಂಜನಾ ಬುರ್ಲಿ ಲುಕ್‌ಗೆ ಪಡ್ಡೆಹುಡುಗರು ಫಿದಾ
Advertisement
Advertisement
ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿಗೆ (BJP) ಹಿನ್ನಡೆ ವಿಚಾರವಾಗಿ ಮಾತನಾಡಿ, ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಜೆಡಿಎಸ್, ನಮ್ಮ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಇದ್ದರಿಂದ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ನಾವು ಉಪಚುನಾವಣೆಯಲ್ಲಿ ಗೆದ್ದಿದ್ದೆವು. ಶಿಗ್ಗಾಂವಿಯಲ್ಲಿ ಮುಸ್ಲಿಂ ವೋಟ್‌ಗಳು ಕಾಂಗ್ರೆಸ್‌ಗೆ ವರದಾನವಾಗಿದೆ. ಬೊಮ್ಮಾಯಿ ಅವರು ಮಗ ಭರತ್‌ನನ್ನು ನಿಲ್ಲಿಸಲ್ಲ ಎಂದು ಹೇಳಿದ್ದರು. ಆದರೆ ಪಕ್ಷದ ಕೇಂದ್ರ ನಾಯಕರ ಒತ್ತಾಯದ ಮೇಲೆ ಮಗನನ್ನ ನಿಲ್ಲಿಸಿದ್ದರು ಎಂದು ತಿಳಿಸಿದರು.
Advertisement
ಮಹಾರಾಷ್ಟ್ರ, ಜಾರ್ಖಂಡ್ ಫಲಿತಾಂಶ ವಿಚಾರವಾಗಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಅಲ್ಲಿನ ಜನ ಕಾಂಗ್ರೆಸ್‌ನ್ನು ತಿರಸ್ಕಾರ ಮಾಡಿದ್ದಾರೆ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಸರ್ಕಾರವಿಲ್ಲ. ಸದ್ಯ ಬಿಜೆಪಿಗೆ ಮೇಲಗೈ ಸಿಗುತ್ತಿಲ್ಲ. ಮೋದಿಯವರ ಹವಾ ಎಲ್ಲ ಕಡೆಯಿದೆ ಎಂದರು.ಇದನ್ನೂ ಓದಿ: 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದ ಬಿಜೆಪಿಗೆ ಜನರು ಇದೀಗ ಉತ್ತರ ಕೊಟ್ಟಿದ್ದಾರೆ – ಎಂ.ಬಿ ಪಾಟೀಲ್