ಬೆಂಗಳೂರು: ಒಳಮೀಸಲಾತಿಗೆ ಕಾಂಗ್ರೆಸ್ (Congress) ಮಾತ್ರ ಮೀನಾಮೇಷ ಎಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಆದರೂ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ. ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಸಹಮತವಿದೆ. ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಮೋದಿ ಅನುಮೋದನೆ ನೀಡಿದ್ದರು. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಜಾತಿಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ. ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.ಇದನ್ನೂ ಓದಿ: ಕೆರೆ ತುಂಬಿಸುವ ಯೋಜನೆ ರದ್ದು ಮಾಡಿಸಿದ್ದಕ್ಕೆ ಆಕ್ರೋಶ – ಶಿವಲಿಂಗೇಗೌಡಗೆ ಗ್ರಾಮಸ್ಥರಿಂದ ಘೇರಾವ್
Advertisement
Advertisement
ರಾಜ್ಯದಲ್ಲಿ ಈಗ ಬರೀ ಎಸ್‌ಐಟಿ ಕಂಡುಬರುತ್ತಿದೆ. ಒಳಮೀಸಲಾತಿ ಮತ್ತು ಜಾತಿಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್‌ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ. ಎಸ್‌ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್‌ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್‌ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.
Advertisement
ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ:
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ. ಬಿ.ಎಸ್.ಯಡಿಯೂರಪ್ಪನವರ (BS Yadiyurappa) ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದರು.
Advertisement
ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ (BJP) ಕ್ಲೀನ್‌ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರ ಕ್ಲೀನ್‌ಚಿಟ್ ಯಾರಿಗೂ ಬೇಕಿಲ್ಲ ಎಂದರು.ಇದನ್ನೂ ಓದಿ: ತಿಂಗಳಿಗೂ ಮೊದಲೇ ಸ್ಕೆಚ್, ಶೂಟರ್‌ಗಳಿಗೆ ತಲಾ 50,000 ಕಾಂಟ್ರ್ಯಾಕ್ಟ್ – ಸಿದ್ದಿಕಿ ಹಂತಕರ ಪ್ಲ್ಯಾನ್ ರೋಚಕ