BidarKarnatakaLatestMain Post

ರಾಹುಲ್ ಗಾಂಧಿಯಿಂದ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ: ಬಿ.ವೈ.ವಿಜಯೇಂದ್ರ

ಬೀದರ್ : ಈ ದೇಶದಲ್ಲಿ ಕಾಂಗ್ರೆಸ್ (Congress) ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಇಂದು ರಾಹುಲ್ ಗಾಂಧಿ (Rahul Gandhi) ಮೂಲಕ ಮತ್ತೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆಯ (Bharat Jodo Padayatra) ವಿರುದ್ಧ ಬಿ.ವೈ. ವಿಜಯೇಂದ್ರ (B.Y. Vijayendra) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ತಾಲೂಕಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್‍ಗೆ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಆಗಬೇಕು ಎಂದು ಹುಡುಕಲು ಆಗುತ್ತಿಲ್ಲ. ಹೀಗಾಗಿ ಅವರಿಂದ ಭಾರತೀಯ ಜನತಾ ಪಾರ್ಟಿ (BJP) ಹೆದರಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಏನೇ ಮಾಡಿದರೂ ಜನರು ಕಾಂಗ್ರೆಸ್ ಪಕ್ಷವನ್ನು ಮರೆತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸೇರಿದಂತೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಪಿಎಫ್‍ಐಯನ್ನು 3 ವರ್ಷಗಳ ಹಿಂದೆಯೇ ಬ್ಯಾನ್ ಮಾಡಬಹುದಿತ್ತು ಮಾಡಿಲ್ಲ, ಈಗ ಚುನಾವಣೆ ಗಿಮಿಕ್: ಪ್ರಜ್ವಲ್ ರೇವಣ್ಣ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಹಾಗೂ ಡಿಕೆಶಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ. ಇದೇ ವೇಳೆ ಪೇ ಸಿಎಂ (PAY cm) ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಅದೇ ತಿರುಗು ಬಾಣವಾಗುತ್ತದೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಮನೆದೇವತೆ ಸವದತ್ತಿ ಶ್ರೀರೇಣುಕಾ ಯಲ್ಲಮ್ಮ ದರ್ಶನ ಪಡೆದ ಸಿಎಂ ಧರ್ಮಪತ್ನಿ!

Live Tv

Leave a Reply

Your email address will not be published. Required fields are marked *

Back to top button