ಮೈಸೂರು: ನಗರದಲ್ಲಿ ನಡೆದ ಜನಾಶೀರ್ವಾದ ಸಮಾವೇಶಕ್ಕೆ ಆಗಮಿಸಿದ ಕಾರ್ಯಕರ್ತರಿಗೆ ಸಿಎಂ ಇಂದು ಮೈಸೂರಿನಲ್ಲಿ ಧನ್ಯವಾದ ಅರ್ಪಿಸಿದ್ದಾರೆ.
ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಭಾನುವಾರದ ಸಮಾವೇಶಕ್ಕೆ ನಿರೀಕ್ಷೆ ಮೀರಿ ಜನ ಬಂದಿದ್ದರು. ಇದು ಅತ್ಯಂತ ಯಶಸ್ವಿ ಸಮಾವೇಶವಾಗಿದೆ. ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಸಿದ್ಧಪಡಿಸಲು ಇಂದು ಸಭೆ ನಡೆಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತದೆ ಎಂದು ಹೇಳಿದರು.
Advertisement
Advertisement
ಜೆಡಿಎಸ್ ಪಕ್ಷ ಜ್ಯಾತ್ಯಾತೀತ ಪಕ್ಷವಾಗಿ ಉಳಿದಿಲ್ಲ. ಈ ಹಿಂದೆ ಬಿಜೆಪಿ ಜೊತೆ ಕೈ ಜೋಡಿಸಿ ಸರ್ಕಾರ ನಡೆಸಿದ್ದಾರೆ. ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತಾರಾ? ಎಂದು ಹೇಳುವ ಮೂಲಕ ಸಮಾವೇಶದಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಸಿಎಂ ಸಮರ್ಥಿಸಿಕೊಂಡರು
Advertisement
ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ ಪಕ್ಷ. ಬಿಜೆಪಿ ಕೋಮುವಾದಿ ಪಕ್ಷ ಎಂದು ಸಿಎಂ ಮತ್ತೆ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಮತ್ತೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಏಪ್ರಿಲ್ ಮೊದಲ ವಾರ ಮೂರನೇ ಹಂತದ ಜನಾಶೀರ್ವಾದ ಪ್ರವಾಸ ಮಾಡಲಿದ್ದು, ಮಲೆನಾಡು ಭಾಗದಲ್ಲಿ ನಡೆಯಲಿದೆ. ಏಪ್ರಿಲ್ 6ಕ್ಕೆ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸುತ್ತೇವೆ ಎಂದು ತಿಳಿಸಿದರು.
Advertisement