ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭೂಕಂಪನ ಆಗಲಿದೆ ಎಂದು ಮಾನವ ಸಂಪನ್ಮೂಲ ಸಚಿವ, ಕರ್ನಾಟಕ ಚುನಾವಣಾ ಉಸ್ತುವಾರಿಯೂ ಆಗಿದ್ದ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ.
ರಾಜಸ್ಥಾನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜಕೀಯದಲ್ಲಿ ಯಾವಾಗ ಬೇಕಾದರೂ ಧಮಾಕ ಆಗಬಹುದು. ಈ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಆಗ್ತಿಲ್ಲ. ಹೀಗಾಗಿ ಜೆಡಿಎಸ್-ಕಾಂಗ್ರೆಸ್‍ನಲ್ಲಿ ಧಮಾಕ ಆಗೋದಂತೂ ನಿಶ್ಚಿತವಾಗಿದೆ. ಆದ್ರೆ ಆ ಧಮಾಕ ಯಾವಾಗ ಅಂತ ಯಡಿಯೂರಪ್ಪ ಅಷ್ಟೇ ಹೇಳಬಹುದು ಅಂತ ಹೇಳಿದ್ದಾರೆ.
Advertisement
Advertisement
ಕರ್ನಾಟಕದಲ್ಲಿ ನಾವೇ ಅತೀ ದೊಡ್ಡ ಪಕ್ಷ, ನಮಗೆ 7 ಶಾಸಕರ ಸಂಖ್ಯೆಯಷ್ಟೇ ಕೊರತೆ ಇದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಒಳ್ಳೆ ಸರ್ಕಾರ ನೀಡ್ತಿಲ್ಲ ಅಂತ ತಿಳಿಸಿದ್ದಾರೆ.
Advertisement
ಯಾವುದೇ ಸಂದರ್ಭದಲ್ಲೂ ಆಪರೇಷನ್ ಕಮಲ ಆಗಬಹುದೆಂಬ ಭೀತಿ ಸಮ್ಮಿಶ್ರ ಸರ್ಕಾರಕ್ಕೆ ಇದೀಗ ಭೀತಿ ಎದುರಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ಯಾವಾಗ ಬೇಕಾದ್ರೂ ಬೀಳಬಹುದು. ಮೈತ್ರಿ ಸರ್ಕಾರ ಒಂದು ಅಸ್ಥಿರ ಸರ್ಕಾರವಾಗಿದ್ದು, ಅನಿವಾರ್ಯದ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಇವರ ನಡುವೆ ಯಾವುದೇ ರೀತಿಯ ಹೊಂದಾಣಿಕೆ ಇಲ್ಲ ಅಂದಿದ್ದಾರೆ.
Advertisement
ಕರ್ನಾಟಕದಲ್ಲಿ ಜನ ಪ್ರಧಾನಿ ಮೋದಿಯನ್ನು ಮೆಚ್ಚಿಕೊಂಡು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಬಿಜೆಪಿಗೆ ಬಹುಮತ ನೀಡಿದ್ದಾರೆ. ಸರ್ಕಾರ ರಚನೆಗೆ ನಮಗೆ 7 ಸ್ಥಾನಗಳಷ್ಟೇ ಬೇಕಾಗಿದೆ. ಇದು ಯಾವಾಗ ಬೇಕಾದ್ರೂ ಆಗಬಹುದು ಎಂದು ಜಾವ್ಡೇಕರ್ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv