ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜನರು ಕೇಂದ್ರದಲ್ಲಿ ಅಧಿಕಾರ ನಡೆಸಲು ಬಿಜೆಪಿ ಮತ ನೀಡಿದ್ದಾರೆಯೇ ಹೊರತು ರಾಜ್ಯದಲ್ಲಿ ಅಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಟ್ವೀಟ್ 1: ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ. ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್.
Advertisement
ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ.
ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್.@INCKarnataka #Mysore
— Siddaramaiah (@siddaramaiah) May 27, 2019
Advertisement
ಟ್ವೀಟ್ 2: ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ.
Advertisement
ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ.#Mysore
— Siddaramaiah (@siddaramaiah) May 27, 2019
Advertisement
ಟ್ವೀಟ್ 3: ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ.
ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ.#Mysore
— Siddaramaiah (@siddaramaiah) May 27, 2019