ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯನ್ನು ಘೋಷಿಸಿಕೊಂಡಿದ್ದು, ಕ್ಷೇತ್ರಗಳ ಹಂಚಿಕೆ ಬಹುತೇಕ ಅಂತಿಮವಾಗಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟವಾಗಿತ್ತು. ಹಾಲಿ ಸಂಸದರು ತಮ್ಮ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಹೈಕಮಾಂಡ್ ಮುಂದೆ ಅಸಮಾಧಾನ ಹೊರ ಹಾಕಿದ್ದರು. ಇದೀಗ ಬಹುತೇಕ ಕ್ಷೇತ್ರಗಳ ಹಂಚಿಕೆಯಾಗಿದ್ದು, ಕಾಂಗ್ರೆಸ್‍ಗೆ 20 ಸೀಟ್, ಜೆಡಿಎಸ್‍ಗೆ 8 ಸೀಟ್ ಎಂಬ ಮಾಹಿತಿ ಲಭ್ಯವಾಗಿದೆ. ಹಳೆ ಮೈಸೂರು ಭಾಗದಲ್ಲಿ ಮೂರು, ಬೆಂಗಳೂರು, ಮಲೆನಾಡು ಭಾಗದಲ್ಲಿ ತೆನೆಗೆ ಒಂದೊಂದು ಸೀಟು ಮತ್ತು ಉತ್ತರ ಕರ್ನಾಟಕದಲ್ಲಿ 3 ಕ್ಷೇತ್ರ ಬಿಟ್ಟುಕೊಡಲು ಕೈ ಚಿಂತನೆ ನಡೆಸಿದೆ.
Advertisement
Advertisement
ಯಾವ ಕ್ಷೇತ್ರಗಳು?:
ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಉತ್ತರ, ಶಿವಮೊಗ್ಗ, ಬೀದರ್, ವಿಜಯಪುರ, ರಾಯಚೂರು ಕೂಡ ಜೆಡಿಎಸ್ ತೆಕ್ಕೆಗೆ ಸಿಗಲಿದೆ. ಜೆಡಿಎಸ್ ತನ್ನ ಅನುಕೂಲಕ್ಕೆ ತಕ್ಕಂತೆ ಸೀಟು ಹಂಚಿಕೊಂಡಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳನ್ನು ತನ್ನ ತೆಕ್ಕೆಯಲ್ಲೇ ಕಾಂಗ್ರೆಸ್ ಉಳಿಸಿಕೊಂಡಿದೆ. ದೋಸ್ತಿಗಳ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾಡಬೇಕಿದೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದ್ದಾರೆ. ಬೆಂಗಳೂರು ಉತ್ತರದಿಂದ ದೇವೇಗೌಡರು ಮತ್ತು ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆಗಳಿವೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv