– ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲ್ಲ
– ಸುಮಲತಾ ಪಕ್ಷೇತರ ಅಭ್ಯರ್ಥಿವಾಗಿ ಸ್ಪರ್ಧಿಸಿದ್ರೂ ಜೆಡಿಎಸ್ ಗೆಲ್ಲುತ್ತೆ
ಮಂಡ್ಯ: ರಾಜ್ಯದಲ್ಲಿ ಮೈತ್ರಿ ಇದ್ದರೂ ಮಂಡ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಶತ್ರುಗಳು ಎಂಬುದನ್ನು ನಾಗಮಂಗಲ ಶಾಸಕ ಸುರೇಶ್‍ಗೌಡ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.
ನಾಗಮಂಗಲದಲ್ಲಿ ಮಾತನಾಡಿದ ಶಾಸಕರು, ನಿಜವಾದ ಕಾಂಗ್ರೆಸ್ಸಿಗರು ಪಕ್ಷದ ಮಾತು ಕೇಳಿ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಪರ ನಿಲ್ಲುತ್ತಾರೆ. ಎಡಬಿಡಂಗಿಗಳು ಮೈತ್ರಿ ಅಭ್ಯರ್ಥಿ ವಿರೋಧಿಸುತ್ತಾರೆ ಎಂದು ಕಾಂಗ್ರೆಸ್ ಶಾಸಕರು, ಕಾರ್ಯಕರ್ತರ ವಿರುದ್ಧ ಹರಿಹಾಯ್ದರು.
Advertisement
Advertisement
ಮಂಡ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸೈದ್ಧಾಂತಿಕವಾಗಿ ರಾಜಕಾರಣ ಮಾಡುತ್ತಿದ್ದು, ಹೊಂದಾಣಿಕೆ ಕಷ್ಟವಾಗುತ್ತಿದೆ. ಶತ್ರುಗಳ ಶತ್ರು ಮಿತ್ರರು ಎಂಬಂತೆ ಸೋತು ಕೆಲಸ ಇಲ್ಲದವರು ಸುಮಲತಾ ಅಂಬರೀಶ್ ಅವರನ್ನು ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
ಯಾರೋ ಮಾತನಾಡಿದರೆ ನಾವ್ಯಾಕೆ ತಲೆಕೆಡಿಸಿಕೊಳ್ಳಬೇಕು. ನಮ್ಮ ವರಿಷ್ಠರು ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಮತನಾಡುತ್ತಾರೆ. ಏನೇ ಆದರೂ ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲು ಸಾಧ್ಯವಿಲ್ಲ. ಸುಮಲತಾ ಅವರು ಪಕ್ಷೇತರರಾಗಿ ಸ್ಪರ್ಧಿಸಿರೆ ನಮ್ಮ ಪಕ್ಷಕ್ಕೆ ನಷ್ಟವಿಲ್ಲ. ಈ ಬಾರಿ ನಾವೇ ಗೆಲ್ಲುತ್ತೇವೆ. ಕಳೆದ ಲೋಕಸಭೆ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಅವರಿಗೆ ಕಾಂಗ್ರೆಸ್‍ನವರೆಲ್ಲ ಮತ ಹಾಕಿದ್ದರಾ? ಪ್ರಚಾರ ಮಾಡಿದ್ದರಾ? ಕೆಲ ಮೋಸಗಾರರು ಇರುತ್ತಾರೆ. ಈ ಬಾರಿಯೂ ಅದೇ ರೀತಿ ಮಾಡುತ್ತಾರೆ. ನಮ್ಮ ಅಭ್ಯರ್ಥಿ ಗೆಲ್ಲಿಸಲು ನಾವು ಹುಷಾರಾಗಿರುತ್ತೇವೆ ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದರು.
Advertisement
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚು ಲೋಕಸಭಾ ಕ್ಷೇತ್ರಗಳಿಂದ ಗೆಲ್ಲಬೇಕು. ಈ ನಿಟ್ಟಿನಲ್ಲಿ ಟಿಕೆಟ್ ಹಂಚಿಕೆ ಆಗುತ್ತೆ. ಆದರೆ ಕಾಂಗ್ರೆಸ್‍ಗೆ ಮಂಡ್ಯವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮೈತ್ರಿ ಧರ್ಮ ಪಾಲನೆ ಆಯಾ ಪಕ್ಷಕ್ಕೆ ಬಿಟ್ಟದ್ದು ಎಂದು ತಿಳಿಸಿದರು.
ಮಾಜಿ ಸಚಿವ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಶಾಸಕ ಸುರೇಶ್‍ಗೌಡ ಅವರು, ಸತ್ಯ ಯಾವಾಗಲೂ ಕಹಿಯಾಗಿರುತ್ತೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv