ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆದಿದ್ದು, ಬರೋಬ್ಬರಿ 11 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಈ ಮೂಲಕ ಅಮೇರಿಕದಿಂದ ಬರುವ ಮೊದಲೇ ಸಿಎಂಗೆ ಶಾಕ್ ನೀಡಿದ್ದಾರೆ. ಇದರ ಜೊತೆ ಇನ್ನು ಮೂರು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಮೊದಲನೆಯದಾಗಿ ಬಿಡುಗಡೆಯಾಗಿರುವ ಬಂಡಾಯಗಾರರ ಪಟ್ಟಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ ನೀಡಿದ್ದಾರೆ. ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್.ಪೇಟೆ ಶಾಸಕ. ನಾರಾಯಣ ಗೌಡ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ತಲ್ಲಣ ಶುರುವಾಗಿದೆ.
ಎರಡನೇ ತಂಡದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಇನ್ನೂ ಸ್ಪೀಕರ್ ಕಚೇರಿಗೆ ಆಗಮಿಸಿಲ್ಲ.