ಬೆಂಗಳೂರು: ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ (CBI) ಬೆತ್ತಲಾಗುತ್ತಲೇ ಇವೆ ಎಂದು ಬಿಜೆಪಿ (BJP) ನಾಯಕರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಪರೇಶ್ ಮೇಸ್ತಾದು ಕೊಲೆಯಲ್ಲ ಬದಲಿಗೆ ಆಕಸ್ಮಿಕ ಸಾವು ಎಂದು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಪರಿಷತ್ ಸದಸ್ಯ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಸಿಬಿಐ ವರದಿಯನ್ನು ನಾವು ಒಪ್ಪುವುದಿಲ್ಲ. ಪರೇಶ್ ಮೇಸ್ತಾದು (Paresh Mesta) ಕೊಲೆಯೇ. ಇವತ್ತು ಏನಾದ್ರು ಸಾಕ್ಷಿ ಸಿಗದಿದ್ದರೆ ಅದಕ್ಕೆ ಸಿದ್ದರಾಮಯ್ಯ (Siddaramaiah) ಸರ್ಕಾರವೇ ಕಾರಣ ಎಂದು ಆರೋಪಿಸಿದ್ದರು.
Advertisement
ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.
⭕ ಡಿ.ಕೆ ರವಿ ಪ್ರಕರಣ – ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ
⭕ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಸರ್ಕಾರಕ್ಕೆ ಸಂಬಂಧವಿಲ್ಲ
⭕ಪರೇಶ್ ಮೇಸ್ತಾ ಪ್ರಕರಣ – ಸಹಜ ಸಾವು
ಸುಳ್ಳು ಹೇಳಿದ್ದ @BJP4Karnataka ರಾಜ್ಯದ ಕ್ಷಮೆ ಕೇಳಬೇಕು.
— Karnataka Congress (@INCKarnataka) October 4, 2022
Advertisement
ಅಷ್ಟೇ ಅಲ್ಲದೇ ಸಾಕ್ಷಿ ನಾಶ ಮಾಡಿದ್ದು ಹಾಗೂ ಪಿಎಫ್‍ಐ ಘೋಷಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ವಿಧಾನಸಭೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಕಾಂಗ್ರೆಸ್‍ನವರು ಹೇಳುವುದೆಲ್ಲ ಸತ್ಯ ಅಲ್ಲ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದೆ.
Advertisement
Advertisement
ಟ್ವೀಟ್‍ನಲ್ಲಿ ಏನಿದೆ?: ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಡಿ.ಕೆ. ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದೆ. ಇನ್ನೂ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೂ ಸರ್ಕಾರಕ್ಕೆ ಸಂಬಂಧವಿಲ್ಲ ಎಂದು ಹೇಳಿದರೆ, ಪರೇಶ್ ಮೇಸ್ತಾ ಪ್ರಕರಣವನ್ನು ಸಹಜ ಸಾವು ಎಂದು ತಿಳಿಸಿದೆ. ಈ ರೀತಿ ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು. ಇದನ್ನೂ ಓದಿ: ಪರೇಶ್ ಮೇಸ್ತಾ ಕೇಸ್ ರೀ ಓಪನ್ ಆಗಲಿ; CBIನದ್ದು ಮೋಸದ ವರದಿ – ಮುತಾಲಿಕ್
ಏನಿದು ಪ್ರಕರಣ?: 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪರೇಶ್ ಮೇಸ್ತಾ ಪತ್ತೆಯಾಗಿದ್ದ. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೊಮು ಸಂಘರ್ಷಕ್ಕೆ ಕಾರಣವಾಗಿತ್ತು.
ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ಪರೇಶ್ ಮೇಸ್ತಾದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ಸಲ್ಲಿಸಿದೆ. ಇದನ್ನೂ ಓದಿ: ಪರೇಶ್ ಮೇಸ್ತಾದು ಕೊಲೆಯೇ, ಸಿದ್ದು ಸರ್ಕಾರದಿಂದ ಸಾಕ್ಷ್ಯ ನಾಶ: ರವಿಕುಮಾರ್ ಕಿಡಿ