Connect with us

Karnataka

ಕೇಶ ಮಂಡನ ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕಿ ಈಗ ಪಕ್ಷೇತರ ಅಭ್ಯರ್ಥಿ

Published

on

ತಿರುವನಂತಪುರಂ: ಟಿಕೆಟ್ ಸಿಗದ್ದಕ್ಕೆ ಮನನೊಂದು ಕೇಶಮಂಡನ ಮಾಡಿಕೊಂಡದ್ದ ಕೇರಳ ಕಾಂಗ್ರೆಸ್ ನಾಯಕಿ ಈಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ.

ಕೇರಳಾ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಲತಿಕಾ ಸುಭಾಷ್ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇತ್ತಮನ್ನೂರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಏಪ್ರಿಲ್ 6ಂದು ನಡೆಯಲಿರುವ ಕೇರಳ ಚುನಾವಣೆಗೆ ಕಾಂಗ್ರೆಸ್‍ನಿಂದ ಲತಿಕಾ ಸೂಭಾಷ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಕಾರಣ ಆಕ್ರೋಶಗೊಂಡು ಕೇರಳ ಮಹಿಳಾ ಕಾಂಗ್ರಸ್ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ತಿರುವನಂತಪುರಂನ ಪಕ್ಷದ ಕಚೇರಿಯ ಮುಂದೆ ಕುಳಿತು ಕೇಶಮಂಡನ ಮಾಡಿಸಿಕೊಂಡು ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿದ್ದರು.

ಲತಿಕಾ ಎಟ್ಟುಮಣ್ಣೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನು. ಆದರೆ ಪಕ್ಷದ ಮುಖ್ಯಸ್ಥರು ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರು ಇರಲಿಲ್ಲ. ಹೀಗಾಗಿ ಮಹಿಳಾ ಅಭ್ಯರ್ಥಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು.

“ಕೇರಳದಲ್ಲಿ ಮಹಿಳಾ ಘಟಕದ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ವಹಿಸಿದೆ. ಮಹಿಳಾ ಘಟಕದ ಮುಖಂಡರು ಮತ್ತು ಕಾರ್ಯಕರ್ತರ ಭಾವನೆಗಳಿಗೆ ಬೆಲೆ ಕೊಡಲಾಗುತ್ತಿಲ್ಲ. ಮಹಿಳಾ ಘಟಕದ ಒಬ್ಬರೇ ಒಬ್ಬ ಕಾರ್ಯಕರ್ತರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಟಿಕೆಟ್ ಘೋಷಿಸಿಲ್ಲ” ಎಂದು ಆರೋಪಿಸಿ ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಲತಿಕಾ ಸುಭಾಷ್ ಪತ್ರ ಬರೆದಿದ್ದರು.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿರುವ 92 ಕ್ಷೇತ್ರಗಳ ಪೈಕಿ 86 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ 6 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೆಲ ದಿನಗಳಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ತಿಳಿಸಿದ್ದಾರೆ. ಕಾಂಗ್ರೆಸ್ ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ. 92 ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 46 ಕಾಂಗ್ರೆಸ್ ಅಭ್ಯರ್ಥಿಗಳು 25-50 ವರ್ಷದೊಳಗಿನವರೇ ಆಗಿದ್ದಾರೆ. ಬಾಕಿ ಉಳಿದ ಶೇ.50ರಷ್ಟು ಕ್ಷೇತ್ರಗಳಲ್ಲಿ ಹಿರಿಯರಿಗೆ ಅವಕಾಶ ನೀಡಲಾಗಿದೆ.

Click to comment

Leave a Reply

Your email address will not be published. Required fields are marked *