Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Delhi Elections | ಗೃಹಲಕ್ಷ್ಮಿ ಮಾದರಿಯಲ್ಲಿ `ಪ್ಯಾರಿ ದೀದಿ’; ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. – `ಕೈʼ ಮೊದಲ ಗ್ಯಾರಂಟಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Delhi Elections | ಗೃಹಲಕ್ಷ್ಮಿ ಮಾದರಿಯಲ್ಲಿ `ಪ್ಯಾರಿ ದೀದಿ’; ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. – `ಕೈʼ ಮೊದಲ ಗ್ಯಾರಂಟಿ!

Latest

Delhi Elections | ಗೃಹಲಕ್ಷ್ಮಿ ಮಾದರಿಯಲ್ಲಿ `ಪ್ಯಾರಿ ದೀದಿ’; ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. – `ಕೈʼ ಮೊದಲ ಗ್ಯಾರಂಟಿ!

Public TV
Last updated: January 6, 2025 5:19 pm
Public TV
Share
4 Min Read
DK Shivakimar
SHARE

– ಕರ್ನಾಟಕ ಮಾದರಿ ಗ್ಯಾರಂಟಿ ಘೋಷಿಸಿದ ಡಿಕೆಶಿ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ (Delhi Elections) ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ `ಗೃಹಲಕ್ಷ್ಮಿ’ ಮಾದರಿಯಲ್ಲಿ `ಪ್ಯಾರಿ ದೀದಿ ಯೋಜನೆ’ (Pyari Didi Yojan) ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಸೋಮವಾರ ಪ್ರಕಟಿಸಿದರು.

ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ನಾಯಕರೊಂದಿಗೆ ಇಂದು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡೆ. ಈ ವೇಳೆ ಮಹಿಳೆಯರಿಗೆ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ “ಪ್ಯಾರಿ ದೀದಿ” ಯೋಜನೆಯನ್ನು ಘೋಷಿಸಲಾಯಿತು. ದಿಲ್ಲಿಯಲ್ಲಿ… pic.twitter.com/KoOyfc65k4

— DK Shivakumar (@DKShivakumar) January 6, 2025

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್‌ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು. ಇದನ್ನೂ ಓದಿ: Chhattisgarh | ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಫೋಟಿಸಿದ ನಕ್ಸಲರು – 9 ಮಂದಿ ದುರ್ಮರಣ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೊದಲ ದಿನವೇ ʻಪ್ಯಾರಿ ದೀದಿʼ ಯೋಜನೆ ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ ಎಂದು ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26 ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ. ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು. ಇದನ್ನೂ ಓದಿ: 60% ಕಮೀಷನ್ ಆರೋಪಕ್ಕೆ ಹೆಚ್‌ಡಿಕೆ ದಾಖಲಾತಿ ಕೊಟ್ಟಿದ್ದಾರಾ? – ಸಿಎಂ ಪ್ರಶ್ನೆ

ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು. ನಂತರ ಗೃಹಲಕ್ಷ್ಮಿ ಯೋಜನೆಯನ್ನು ಪ್ರಿಯಾಂಕಾ ಗಾಂಧಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು ಎಂದು ಹೇಳಿದರು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್‌ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು. ಮೊದಲ 3 ತಿಂಗಳಲ್ಲಿ ಎಲ್ಲಾ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ ಎಂದು ವಿವರಿಸಿದರು.

ಮಾಸಿಕ 4-5 ಸಾವಿರ ಉಳಿತಾಯ:
ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ. ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾ ಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗಟಾರ ಸ್ವಚ್ಛತೆಗೆ 200 ರೂ. ಕೇಳಿದ ಪಂಚಾಯತ್‌ – ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದಾರೆ ವೃದ್ಧ ದಂಪತಿ

ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳ ಕುಟುಂಬಗಳಲ್ಲಿ ಆಗಿರುವ ಬದಲಾವಣೆ, ನೆರವಿನ ಕುರಿತ ವಿಡಿಯೋಗಳನ್ನು ಪ್ರಸಾರ ಮಾಡಲಾಯಿತು. ನಾವು ಇಲ್ಲಿ ತೋರಿಸಿರುವ ವಿಡಿಯೋಗಳು ನಾವು ಮಾಡಿರುವುದಲ್ಲ. ಮಾಧ್ಯಮಗಳು ವರದಿ ಮಾಡಿರುವ ವಿಡಿಯೋಗಳನ್ನು ನಿಮ್ಮ ಮುಂದೆ ಇಟ್ಟಿದ್ದೇವೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಯಾವುದೇ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ರವಾನಿಸಲಾಗುತ್ತಿದೆ ಎಂದರು.

ಟೀಕಿಸಿದವರಿಂದಲೇ ನಮ್ಮ ಯೋಜನೆ ನಕಲು:
ನಾವು ಈ ಯೋಜನೆ ಘೋಷಣೆ ಮಾಡಿದಾಗ, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರ ದಿವಾಳಿಯಾಗಲಿದೆ ಎಂದು ಮಧ್ಯಪ್ರದೇಶದಲ್ಲಿ ಹೇಳಿದರು. ನಂತರ ಮಹಾರಾಷ್ಟ್ರದಲ್ಲೂ ನಮ್ಮ ಯೋಜನೆ ವಿರುದ್ಧ ಅಪಪ್ರಚಾರ ಮಾಡಿದರು. ಅಂತಿಮವಾಗಿ ಎಲ್ಲಾ ರಾಜ್ಯಗಳ ಚುನಾವಣೆಯಲ್ಲೂ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕಲ್ಯಾಣಕ್ಕಾಗಿ, ರಕ್ಷಣೆಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಮೋದಿ ಅವರ ಸರ್ಕಾರ ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿತ್ತು. ಆದರೆ ಬೆಲೆಗಳನ್ನು ಡಬಲ್ ಮಾಡಿತು. ಜನಧನ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದಂತೆ ಭರವಸೆ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರಗಳು ಕೊಟ್ಟ ಮಾತನ್ನು ಎಂದಿಗೂ ಉಳಿಸಿಕೊಂಡಿಲ್ಲ. ಆದರೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿವೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಗ್ರಾಮೀಣ ಉದ್ಯೋಗ ಖಾತರಿ, ಮಾಹಿತಿ ಹಕ್ಕು ಸೇರಿದಂತೆ ಸಂವಿಧಾನಿಕ ತಿದ್ದುಪಡಿ ಮೂಲಕ ಗ್ಯಾರಂಟಿ ಯೋಜನೆ ನೀಡಲಾಗಿತ್ತು. ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿಗಳ ಕಾಲ ದೇಶವನ್ನು ಆಳಿದೆ. ಮತ್ತೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಳ್ಳೆಯ ದಿನಗಳು ಮತ್ತೆ ಬರಲಿವೆ. ದೆಹಲಿ ಹಾಗೂ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಜನರು ನಮಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

TAGGED:congressDelhi electionsDK ShivakumarPyari Didi Yojanaಕಾಂಗ್ರೆಸ್‌ ಗ್ಯಾರಂಟಿಡಿ.ಕೆ.ಶಿವಕುಮಾರ್ದೆಹಲಿ ಚುನಾವಣೆಪ್ಯಾರಿ ದೀದಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
12 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
22 minutes ago
rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
37 minutes ago
maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
42 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
1 hour ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?