ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ವಿರುದ್ಧ ಕಾಂಗ್ರೆಸ್ (Congress) ಮುಖಂಡ ಹಾಗೂ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ (Raju Kage) ಅಸಮಾಧಾನ ಹೊರಹಾಕಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ ಅವರು, ಮುಜರಾಯಿ ಇಲಾಖೆಯ (Muzrai Department) ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಅನುದಾನ ನೀಡಲಾಗುತ್ತಿದೆ. ಆದರೆ ನಮಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಆತ್ಮೀಯ ಸಾವೇ, ನನ್ನ ಜೀವನದಲ್ಲಿ ಬಾ – IPS ಅಧಿಕಾರಿ ಹತ್ಯೆ ಆರೋಪಿ ಡೈರಿಯಲ್ಲಿತ್ತು ನೋವಿನ ಸಾಲು
ಮುಜರಾಯಿ ಇಲಾಖೆ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಪರೋಕ್ಷವಾಗಿ ಆರೋಪಿಸಿದ ರಾಜು ಕಾಗೆ ದೇವಸ್ಥಾನ ನಿರ್ಮಾಣದಲ್ಲೂ ರಾಜಕಾರಣ ಸರಿಯಲ್ಲ ಎಂದಿದ್ದಾರೆ. ನಮ್ಮ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ ನಾನು ಭಾಗವಹಿಸಿದ್ದಕ್ಕೆ ಬಿಜೆಪಿ ಅವರು ದೇವಸ್ಥಾನ ನಿರ್ಮಾಣಕ್ಕಾಗಿ ದೇಣಿಗೆ ಹಣ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗ್ತಿವೆ : ಕಾಂಗ್ರೆಸ್